ನಾಳೆ ಮೇಲಿನಕುರುವಳ್ಳಿ ವಿದ್ಯಾಗಣಪತಿ ಸಮಿತಿ ವತಿಯಿಂದ ವಿವಿಧ ಕಾರ್ಯಕ್ರಮ
ತೀರ್ಥಹಳ್ಳಿ : ಮೇಲಿನಕುರುವಳ್ಳಿಯ ಶಾಲೆಯ ಆವರಣದಲ್ಲಿ ಪ್ರತಿಷ್ಠಾಪನೆ ಮಾಡಲ್ಪಟ್ಟ ವಿದ್ಯಾಗಣಪತಿ ಸೇವಾ ಸಮಿತಿ ವತಿಯಿಂದ ನಾಳೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ.
ಬೆಳಗ್ಗೆ 9 ಗಂಟೆಗೆ ಏಕನಾರಿಕೇಳ ಗಣಹೋಮ, ಸಾಮೂಹಿಕ ಸತ್ಯನಾರಾಯಣ ಪೂಜೆ, ಹಾಗೂ ಮಧ್ಯಾಹ್ನ 1 ಗಂಟೆಗೆ ಸಾರ್ವಜನಿಕ ಅನ್ನ ಸಂತರ್ಪಣೆ ನಡೆಯಲಿದೆ. ಈ ಸಂದರ್ಭದಲ್ಲಿ ಆರೋಗ್ಯ ತಪಾಸಣೆ ಕಾರ್ಯಕ್ರಮ ನಡೆಯಲಿದ್ದು ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಆರೋಗ್ಯ ತಪಾಸಣೆಯಲ್ಲಿ ಮಕ್ಕಳ ತಜ್ಞರು, ಕ್ಯಾನ್ಸರ್ ಸ್ಪೆಷಲಿಸ್ಟ್, ಬಿಪಿ ಶುಗರ್ ಹೀಗೆ ತಪಾಸಣೆ ಮಾಡಿಸಿಕೊಳ್ಳಬಹುದು. ಹಾಗೆ ಎಸ್ ಎಸ್ ಎಲ್ ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಗ್ರಾಮಪಂಚಾಯಿತಿ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಗೌರವಿಸುವ ಕಾರ್ಯಕ್ರಮ ನಡೆಯಲಿದೆ.
ಸಂಜೆ 7 ಗಂಟೆಗೆ ಕಾಂತರ ಖ್ಯಾತಿಯ ಕಾಡಿನಲ್ಲೊಂದು ಸೊಪ್ಪು ಸಿಗ್ತದೆ ಎಂದೇ ಪ್ರಸಿದ್ದಿ ಪಡೆದ ಹಾಸ್ಯನಟ ದೀಪಕ್ ರೈ ಮತ್ತು ತಂಡದವರಿಂದ " ಅಪ್ಪ " ಎಂಬ ಕನ್ನಡ ಹಾಸ್ಯಮಯ ನಾಟಕ ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮದಲ್ಲಿ ಸ್ಥಳೀಯರು ಹಾಗೂ ಸಾರ್ವಜನಿಕರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು ವಿನಂತಿಸಿದ್ದಾರೆ