ಶಿವಮೊಗ್ಗದ ಶಾಲೆಗಳಿಗೆ ನಾಳೆ ರಜೆ ಘೋಷಣೆ..!
ಶಿವಮೊಗ್ಗ: ನಗರದಲ್ಲಿ ಸೆಪ್ಟೆಂಬರ್ 6, 2025 ರಂದು ಹಿಂದೂ ಮಹಾಸಭಾ ಆಯೋಜಿಸಿರುವ ಗಣಪತಿ ವಿಸರ್ಜನಾ ಮೆರವಣಿಗೆಯ ಹಿನ್ನೆಲೆಯಲ್ಲಿ, ನಗರ ವ್ಯಾಪ್ತಿಯ ಎಲ್ಲಾ ಶಾಲೆಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಈ ಆದೇಶವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ನಾಯ್ಕ್ ಅವರು ಹೊರಡಿಸಿದ್ದಾರೆ. ಒಂದನೇ ತರಗತಿಯಿಂದ ಹತ್ತನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಈ ರಜೆ ಅನ್ವಯವಾಗಲಿದೆ.
ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಲ್ಲಿ ನಡೆಯಲಿದ್ದು, ಇದರಿಂದ ಸಂಚಾರ ವ್ಯವಸ್ಥೆಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆ ಇದೆ. ಮಕ್ಕಳ ಸುರಕ್ಷತೆ ಮತ್ತು ಸಂಚಾರದ ಸುಗಮತೆಯನ್ನು ಗಮನದಲ್ಲಿಟ್ಟುಕೊಂಡು, ಶಿವಮೊಗ್ಗ ನಗರ ವ್ಯಾಪ್ತಿಯ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಈ ರಜೆಯು ಒಂದನೇ ತರಗತಿಯಿಂದ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತವಾಗಿದ್ದು, ಪಿಯು ಕಾಲೇಜುಗಳು ಮತ್ತು ಇತರ ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಈ ಆದೇಶವು ಅನ್ವಯವಾಗುವುದಿಲ್ಲ.
Tags:
ಶಿವಮೊಗ್ಗ ಸುದ್ದಿ