ತೀರ್ಥಹಳ್ಳಿ ಪಟ್ಟಣದಲ್ಲಿ ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಮಾಡ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇ ಬೇಕು...tth

ತೀರ್ಥಹಳ್ಳಿ ಪಟ್ಟಣದಲ್ಲಿ ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಮಾಡ್ತೀರಾ? ಹಾಗಾದ್ರೆ ಈ ಸುದ್ದಿ ಓದ್ಲೇ ಬೇಕು...
ತೀರ್ಥಹಳ್ಳಿ :  ಪಟ್ಟಣದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದ್ದು ಸುಗಮ ಸಂಚಾರಕ್ಕೆ ಸರಿಯಾದ ರೀತಿಯಲ್ಲಿ ಪಾರ್ಕಿಂಗ್ ಮಾಡದಿರುವುದು ಹಾಗೂ ಸಾರ್ವಜನಿಕರ ಅತಿ ವೇಗ ಮತ್ತು ಅಜಾಗರುಕತೆಯಿಂದ ಅಪಘಾತಗಳು ಸಂಭವಿಸುತ್ತಿದೆ.

ಸಾರ್ವಜನಿಕರು ತೀರ್ಥಹಳ್ಳಿ ಪೊಲೀಸ್ ಠಾಣೆ ವತಿಯಿಂದ ನಿಗದಿಪಡಿಸಿದ ನಾಲ್ಕು ಚಕ್ರದ ವಾಹನಗಳು ನಿಲ್ಲುವ ಸ್ಥಳಗಳು ಮತ್ತು ದ್ವಿಚಕ್ರ ವಾಹನಗಳು ನಿಲ್ಲುವ ಸ್ಥಳಗಳಲ್ಲಿ ವಾಹನಗಳನ್ನು ಸರದಿ ಸಾಲಿನಲ್ಲಿ ಪಾರ್ಕಿಂಗ್ ಮಾಡುವುದು ಮತ್ತು ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಿ  ವಾಹನವನ್ನು ಚಲಾವಣೆ ಮಾಡುವುದು ಮುಂದಿನ ದಿನಗಳಲ್ಲಿ ಹೆಲ್ಮೆಟ್ ಧರಿಸದೆ ಇರುವ ಹಾಗೂ ಸಿಟ್ ಬೆಲ್ಟ್  ಧರಿಸದೆ ಇರುವ ವಾಹನಗಳ ಸವಾರರ ಮತ್ತು ಸರಿಯಾದ ಕ್ರಮದಲ್ಲಿ ಪಾರ್ಕಿಂಗ್ ಮಾಡದೇ ಇರುವವರು ಮೇಲೆ ಸೂಕ್ತ ರೀತಿಯ ಕ್ರಮಗಳನ್ನು ಮತ್ತು ದಂಡವನ್ನು ವಿಧಿಸಲಾಗುವುದು ಎಂದು ಪೊಲೀಸ್ ಇಲಾಖೆ ಈ ಮೂಲಕ ತಿಳಿಸಿದೆ..







Previous Post Next Post