ದೆಹಲಿಯಲ್ಲಿ ಬಾಂಬ್ ಸ್ಫೋಟ - ಶಿವಮೊಗ್ಗದಲ್ಲಿ ಹೈ ಅಲರ್ಟ್‌, ಹೇಗಿದೆ ತಪಾಸಣೆ..!? shivamogga

ದೆಹಲಿಯಲ್ಲಿ ಬಾಂಬ್ ಸ್ಫೋಟ - ಶಿವಮೊಗ್ಗದಲ್ಲಿ ಹೈ ಅಲರ್ಟ್‌, ಹೇಗಿದೆ ತಪಾಸಣೆ..!?
ಶಿವಮೊಗ್ಗ: ಸೋಮವಾರ ಸಂಜೆ ದೆಹಲಿಯಲ್ಲಿ ನಡೆದ ಬಾಂಬ್ ಸ್ಪೋಟದ ಬೆನ್ನಲ್ಲೇ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. ಈ ಹಿನ್ನಲೆ ಶಿವಮೊಗ್ಗದಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. 

ಈ ವಿಚಾರಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ತಪಾಸಣೆ ಹೆಚ್ಚಳ ಮಾಡಲಾಗಿದೆ. ರಾತ್ರಿಯಿಂದಲೇ ಶಿವಮೊಗ್ಗ ನಗರದಾದ್ಯಂತ ಬಾಂಬ್‌ ಪತ್ತೆ ದಳ ಮತ್ತು ಶ್ವಾನದಳದಿಂದ  ಪರಿಶೀಲನೆ ನಡೆಸಿತು. ಶಿವಮೊಗ್ಗದ ಖಾಸಗಿ ಬಸ್‌ ನಿಲ್ದಾಣ, ಕೆಎಸ್‌ಅರ್‌ಟಿಸಿ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣ, ಸಿಟಿ ಸೆಂಟರ್‌ ಮಾಲ್‌, ಸೇರದಂತೆ ಅತೀ ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ತಪಾಸಣೆ ನಡೆಸಲಾಗಿದೆ. 

ರೈಲ್ವೆ ಹಾಗೂ ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ..

ರೈಲ್ವೆ ಹಾಗೂ ವಿಮಾನ ನಿಲ್ದಾಣದಲ್ಲಿ ಅಲರ್ಟ್‌ ಪ್ರಕಟಿಸಲಾಗಿದೆ. ನಿಲ್ದಾಣಕ್ಕೆ ಪ್ರವೇಶಿಸುವ ಪ್ರಯಾಣಿಕರ ಲಗೇಜ್‌ಗಳ ತಪಾಸಣೆ ನಡೆಸುವಂತೆ ಪೊಲೀಸರಿಗೆ ಸೂಚನೆ ಬಂದಿದೆ.  ಇನ್ನೊಂದೆಡೆ ಶಿವಮೊಗ್ಗ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ತಪಾಸಣೆ ಕಟ್ಟುನಿಟ್ಟಾಗಿ ಮಾಡಲು ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.



Previous Post Next Post