ಕೆಸೆಟ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸ್ಮಿತಾ...
ತೀರ್ಥಹಳ್ಳಿ : ತಾಲೂಕಿನ ಬಾಳೆಬೈಲುನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಂ. ಕಾಂ. ವಿದ್ಯಾರ್ಥಿನಿ ಸ್ಮಿತಾ 2025ನೇ ಸಾಲಿನಲ್ಲಿ ಪ್ರಾಧ್ಯಾಪಕರ ಹುದ್ದೆಗೆ ಆಯ್ಕೆಯಾಗಲು ಯುಜಿಸಿ ನಿಗದಿಪಡಿಸಿರುವ ಕೆಸೆಟ್ ಪರೀಕ್ಷೆಯಲ್ಲಿ ಉತ್ತಿರ್ಣ ಆಗಿದ್ದಾರೆ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆಯಾದ ಡಾ.ಸೌಮ್ಯ ತಿಳಿಸಿದ್ದಾರೆ.
ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ರೀತಿ ಸ್ಪರ್ಧಾತ್ಮಕ ಪರೀಕ್ಷೆ ಉತ್ತಿರ್ಣ ಆಗುವುದು ತುಂಬಾ ಕಷ್ಟವಾಗುತ್ತದೆ.ಆದರೆ ಈ ವಿದ್ಯಾರ್ಥಿನಿ ಕಾಲೇಜಿನ ಪ್ರಾಧ್ಯಾಪಕರ ಮಾರ್ಗದರ್ಶನ ಹಾಗೂ ಕಠಿಣ ಪರಿಶ್ರಮದಿಂದ ಪರೀಕ್ಷೆಯಲ್ಲಿ ಉತ್ತಿರ್ಣ ಆಗಿ ಕಾಲೇಜು, ಕುಟುಂಬಕ್ಕೆ ಕೀರ್ತಿ ತಂದಿದ್ದಾಳೆ.
ಕು.ಸ್ಮಿತಾ ಕೆ.ಎಸ್. ಅವರ ಸಾಧನೆಯನ್ನು ಕಾಲೇಜಿನ ಸಿಡಿಸಿ ಅಧ್ಯಕ್ಷರು ಶಾಸಕರಾದ ಆರಗ ಜ್ಞಾನೇಂದ್ರ, ಸಿಡಿಸಿ ಸದಸ್ಯರು, ಪ್ರಾಂಶುಪಾಲರು, ಉಪನ್ಯಾಸಕರು ಅಭಿನಂದಿಸಿದ್ದಾರೆ.
Tags:
ತೀರ್ಥಹಳ್ಳಿ ಸುದ್ದಿ