ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮಿಥಾಲಿ ಟಿ ಎಸ್ ರಾಜ್ಯಮಟ್ಟಕ್ಕೆ ಆಯ್ಕೆ
ತೀರ್ಥಹಳ್ಳಿ : ದಿನಾಂಕ 17.11.2025 ರಂದು ಶಾಲಾ ಶಿಕ್ಷಣ ಇಲಾಖೆಯವರು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆಸಿದ 17 ವರ್ಷ ವಯೊಮಿತಿಯೊಳಗಿನ ಬಾಲಕ-ಬಾಲಕಿಯರ ಜಿಲ್ಲಾಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ವಾಗ್ದೇವಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ಮಿಥಾಲಿ ಟಿ.ಎಸ್ (9ನೆಯ ತರಗತಿ) ಭಾಗವಹಿಸಿ ಗುಂಡು ಎಸೆತದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ.
ಈ ವಿದ್ಯಾರ್ಥಿನಿಯು ತಗಡವಳ್ಳಿಯ ಗೀತಾ ಹಾಗೂ ಶಶಿಕಾಂತ್ ದಂಪತಿಗಳ ಪುತ್ರಿಯಾಗಿದ್ದು ಶೈಕ್ಷಣಿಕವಾಗಿ ಪ್ರತಿಭಾನ್ವಿತೆ, ಮತ್ತು ಗುಂಡು ಎಸೆತದಲ್ಲಿ ವಿಶೇಷ ತರಭೇತಿಯನ್ನೂ ಸಹ ಪಡೆಯುತ್ತಿದ್ದಾಳೆ. ಶಿಕ್ಷಣ ಇಲಾಖೆವರು ಆಯೋಜಿಸಿರುವ ಕ್ರೀಡೆಗಳಲ್ಲಿ ಮಾತ್ರವಲ್ಲದೇ ದಸರಾ ಕ್ರೀಡೆಯಲ್ಲಿಯೂ ಸಹ ಅನೇಕ ಬಹುಮಾನವನ್ನು ಪಡೆಯುವುದರಮೂಲಕ ಓದುತ್ತಿರುವ ಶಾಲೆಗೆ ತಾಲ್ಲೂಕಿಗೆ ಕೀರ್ತಿಯನ್ನು ತಂದಿರುತ್ತಾಳೆ.
ಇವಳ ಈ ಸಾಧನೆಯನ್ನು ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು ಸದಸ್ಯರು ಶಿಕ್ಷಕವೃಂದ ಮತ್ತು ಪೋಷಕರು ಅಭಿನಂದಿಸಿ ರಾಜ್ಯಮಟ್ಟದ ಸ್ಪರ್ಧೆಯಲ್ಲಿಯೂ ಸಹ ಚಿನ್ನದ್ಧಪದಕವನ್ನು ಪಡುಕೊಳ್ಳಲಿ ಎಂದು ಶುಭ ಹಾರೈಸಿರುತ್ತಾರೆ.
Tags:
ವಾಗ್ದೇವಿ ಸಂಸ್ಥೆ