ಭಾರಿ ಹೈಪ್ ಕ್ರಿಯೇಟ್ ಮಾಡಿದ್ದ ಬಿಜೆಪಿ ಪ್ರತಿಭಟನೆ ಸ್ಥಗಿತ ಆಗಿದ್ದು ಯಾಕೆ..!? bjp protest cancel

ಭಾರಿ ಹೈಪ್ ಕ್ರಿಯೇಟ್ ಮಾಡಿದ್ದ ಬಿಜೆಪಿ ಪ್ರತಿಭಟನೆ ಸ್ಥಗಿತ ಆಗಿದ್ದು ಯಾಕೆ..!?
ತೀರ್ಥಹಳ್ಳಿ : ಮಾಜಿ ಗೃಹ ಸಚಿವ ಹಾಗೂ ಹಾಲಿ ಶಿಕ್ಷಣ ಸಚಿವರ ನಡುವಿನ ವಾಕ್ ಸಮರದ ನಂತರದಲ್ಲಿ ಭಾರಿ ಹೈಪ್ ಕ್ರಿಯೇಟ್ ಮಾಡಿದ್ದ ಬಿಜೆಪಿಯ ಯುವ ಮುಖಂಡರ ಪ್ರತಿಭಟನೆ ಏಕಾಏಕಿ ಸ್ಥಗಿತಗೊಂಡಿದೆ. ಇಂದು ಬೆಳಗ್ಗೆ 11 ಗಂಟೆಗೆ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು . ಆದರೆ ಪ್ರತಿಭಟನೆಯನ್ನು ಏಕಾಏಕಿ ಸ್ಥಗಿತಗೊಳಿಸಲಾಗಿದೆ.

ಕಾಂಗ್ರೆಸ್ ನ ಯುವ ಸಂಕಲ್ಪ ಯಾತ್ರೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪನವರು 
ಕಾರ್ಯಕ್ರಮದ ವೇದಿಕೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದ ಶಾಸಕರಾದ ಅರಗ ಜ್ಞಾನೇಂದ್ರರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಕೆಲವು ಪದ ಪ್ರಯೋಗಗಳನ್ನ ಮಾಡಿದ ಹಿನ್ನೆಲೆಯಲ್ಲಿ  ಬಿಜೆಪಿಯ ಯುವ ಮುಖಂಡರು ಹಾಗೂ ಕಾರ್ಯಕರ್ತರು ಕೆಂಡಮಂಡಲವಾಗಿದ್ದರು. ಅಷ್ಟೇ ಅಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಹತ್ತಾರು ವಿಡಿಯೋಗಳನ್ನು ಹರಿ ಬಿಡುವ ಮೂಲಕ ಮಧು ಬಂಗಾರಪ್ಪನವರು ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದರು.

ಈ ವಿಚಾರಕ್ಕೆ ಸಂಬಂಧಪಟ್ಟಂತೆ ಬಿಜೆಪಿಯ ಕಚೇರಿ ಎದುರು ಪ್ರತಿಭಟನೆಯೊಂದನ್ನ ಹಮ್ಮಿಕೊಳ್ಳಲಾಗಿತ್ತು. ಆದರೆ ಶಾಸಕ ಆರಗ ಜ್ಞಾನೇಂದ್ರರವರು ಬಿಜೆಪಿಯ ಕಾರ್ಯಕರ್ತರಿಗೆ ಕರೆ ಮಾಡಿ ಪ್ರತಿಭಟನೆಯನ್ನ ಮಾಡದಂತೆ ಹಾಗೂ ನಾವು ಏನೆಂದು ತೀರ್ಥಹಳ್ಳಿ ಕ್ಷೇತ್ರದ ಜನರಿಗೆ ತಿಳಿದಿದೆ. ಇಂತಹ ವಿಚಾರಗಳಿಗೆ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ ಎಂಬ ಮಾತು ಕೇಳಿಬಂದಿದೆ. ಈ ಕಾರಣದಿಂದ ಬಿಜೆಪಿ ಕಾರ್ಯಕರ್ತರು ಹಮ್ಮಿಕೊಂಡಿದ್ದಂತಹ ಪ್ರತಿಭಟನೆಯನ್ನು ಸ್ಥಗಿತಗೊಳಿಸಲಾಗಿದೆ ಎನ್ನಲಾಗಿದೆ.
Previous Post Next Post