ಶಿವಮೊಗ್ಗದಲ್ಲಿ ‘ಗಿಚ್ಚಿ ಗಿಲಿಗಿಲಿ’ ಆಡಿಷನ್, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು? Colours kannada

ಶಿವಮೊಗ್ಗದಲ್ಲಿ ‘ಗಿಚ್ಚಿ ಗಿಲಿಗಿಲಿ’ ಆಡಿಷನ್, ಎಲ್ಲಿ? ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗ: ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ. 14ರಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ಸವಳಂಗ ರಸ್ತೆಯಲ್ಲಿರುವ ಬಸವೇಶ್ವರ ನಗರದ 3ನೇ ಕ್ರಾಸ್‌ನಲ್ಲಿರುವ ಆಕ್ಸ್‌ಫರ್ಡ್ ಇಂಗ್ಲಿಷ್ ಸ್ಕೂಲ್‌ನ ಆವರಣದಲ್ಲಿ ಆಡಿಷನ್ ನಡೆಯಲಿದೆ.

5 ರಿಂದ 12 ವರ್ಷ ವಯೋಮಿತಿಯ ಮಕ್ಕಳು ಈ ಆಡಿಷನ್‌ನಲ್ಲಿ ಭಾಗವಹಿಸಬಹುದು. ಆಸಕ್ತ ಮಕ್ಕಳು ನಿಗದಿತ ದಿನಾಂಕದಂದು ಪೋಷಕರೊಂದಿಗೆ ಭಾವಚಿತ್ರ, ಮಕ್ಕಳ ಮತ್ತು ಪೋಷಕರ ಆಧಾರ್ ಕಾರ್ಡ್‌ ಜೆರಾಕ್ಸ್ ಪ್ರತಿ ಸಹಿತ ಆಡಿಷನ್‌ಗೆ ಹಾಜರಾಗಬೇಕು ಎಂದು ಕಲರ್ಸ್ ಕನ್ನಡ ವಾಹಿನಿಯ ಪ್ರಕಟಣೆ ತಿಳಿಸಿದೆ.


Previous Post Next Post