ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ ಗೀತಾ ರಮೇಶ್ ಆಯ್ಕೆ Muncipal

ಪಟ್ಟಣ ಪಂಚಾಯಿತಿ ನೂತನ ಪ್ರಭಾರ ಅಧ್ಯಕ್ಷರಾಗಿ  ಗೀತಾ ರಮೇಶ್ ಆಯ್ಕೆ 

ತೀರ್ಥಹಳ್ಳಿ :ಪಟ್ಟಣ ಪಂಚಾಯಿತಿ ಪ್ರಭಾರ ಅಧ್ಯಕ್ಷರಾಗಿ ಶ್ರೀಮತಿ ಗೀತಾ ರಮೇಶ್ ರವರು  ಡಿ. 8 ರಂದು ಅಧಿಕಾರ ಸ್ವೀಕರಿಸಿದರು.

ಅಧ್ಯಕ್ಷರಾಗಿದ್ದ ರಹಮತ್ ಉಲ್ಲಾ ಅಸಾದಿ ಅವರನ್ನು ಈಗಾಗಲೇ ಪಕ್ಷದ ಆದೇಶದಂತೆ ಕೆಳಗೆ ಇಳಿಸಲಾಗಿದ್ದು
ಮುಂದಿನ ಅಧ್ಯಕ್ಷರ ಪ್ರಕ್ರಿಯೆ ನಡೆಯಬೇಕಿದೆ. ಆದರೆ ಅಷ್ಟರೊಳಗೆ ತೀರ್ಥಹಳ್ಳಿಯ ಎಳ್ಳಮಾವಾಸ್ಯೆ ಜಾತ್ರೆ ಇರುವುದರಿಂದ ಪ್ರಭಾರ ಅಧ್ಯಕ್ಷರನ್ನಾಗಿ ಗೀತಾ ರಮೇಶ್ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಸಂದರ್ಭದಲ್ಲಿ ಮಾಜಿ ಶಿಕ್ಷಣ  ಸಚಿವ ಕಿಮ್ಮನೆ ರತ್ನಾಕರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆಸ್ತೂರು ಮಂಜುನಾಥ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಕೆಳಕೆರೆ ಪೂರ್ಣೇಶ್, ಪ.ಪಂ. ಸದಸ್ಯರಾದ ಜಯಪ್ರಕಾಶ್ ಶೆಟ್ಟಿ, ಬಿ.ಗಣಪತಿ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ವರಲಕ್ಷ್ಮಿ,  ವಿಲಿಯಂ ಮಾರ್ಟೀಸ್, ಅಮರನಾಥ್ ಶೆಟ್ಟಿ, ಕೇಳೂರು ಮಿತ್ರ  ಸೇರಿದಂತೆ  ಅನೇಕ ಮುಖಂಡರು ಉಪಸ್ಥಿತರಿದ್ದರು
Previous Post Next Post