ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿಗಳು ಸೇರಿ ನಾಲ್ವರಿಗೆ ಗಂಭೀರ ಗಾಯ ! Rippanpete

ಬಸ್ ಹಾಗೂ ಟ್ಯಾಂಕರ್ ಲಾರಿ ನಡುವೆ ಭೀಕರ ಅಪಘಾತ ; ವಿದ್ಯಾರ್ಥಿಗಳು ಸೇರಿ ನಾಲ್ವರಿಗೆ ಗಂಭೀರ ಗಾಯ !
ರಿಪ್ಪನ್‌ಪೇಟೆ : ಬೆಳ್ಳಂಬೆಳಗ್ಗೆ ಕೋಡೂರಿನ ಪ್ರೌಢ ಶಾಲೆ ಬಳಿ ಖಾಸಗಿ ಬಸ್ ಹಾಗೂ ಪೆಟ್ರೋಲ್ ಟ್ಯಾಂಕರ್ ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

ಹೊಸನಗರದಿಂದ ಬರುತ್ತಿದ್ದ ಗಜಾನನ ಬಸ್ ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಘಟನೆಯಲ್ಲಿ ಬಸ್‌ನಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಹಲವರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದರೆ ಚಾಲಕ, ಓರ್ವ ಮಹಿಳೆ ಸೇರಿದಂತೆ ನಾಲ್ವರಿಗೆ ಗಂಭೀರ ಗಾಯವಾದ ಘಟನೆ ನಡೆದಿದೆ.

ಘಟನೆ ನಡೆಯುತಿದ್ದಂತೆ ಸ್ಥಳೀಯರು ನೆರವಿಗೆ ಧಾವಿಸಿ ಬಸ್‌ನಲ್ಲಿದ್ದ ಗಾಯಾಳು ಪ್ರಯಾಣಿಕರನ್ನು ಆಂಬುಲೆನ್ಸ್ ಮೂಲಕ ಶಿವಮೊಗ್ಗ ಆಸ್ಪತ್ರೆಗೆ ರವಾನಿಸಲಾಗಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



Previous Post Next Post