ಸಂಸದ ಬಿ ವೈ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ..! Accident

ಸಂಸದ ಬಿ ವೈ ರಾಘವೇಂದ್ರ ಕಾರಿಗೆ ಮತ್ತೊಂದು ಕಾರು ಡಿಕ್ಕಿ..!
ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ.

ಕುಂಚೇನಹಳ್ಳಿ ಸಮೀಪ ಸಂಸದರ ಕಾರಿಗೆ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಎರಡು ಕಾರುಗಳಿಗೆ ಹಾನಿಯಾಗಿದೆ. ಸಂಸದ ರಾಘವೇಂದ್ರ ಸೇರಿದಂತೆ ಕಾರಿನಲ್ಲಿದ್ದ ಸಂಸದರ ಕಚೇರಿ ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
Previous Post Next Post