ಕಟ್ಟೆಹಕ್ಲುವಿನಲ್ಲಿ ಗೋ ಕಳ್ಳತನ - ಕಣ್ಮುಚ್ಚಿ ಕುಳಿತಿರುವ ಅಧಿಕಾರಿಗಳು..!
ತೀರ್ಥಹಳ್ಳಿ: ಇತ್ತೀಚಿಗೆ ತೀರ್ಥಹಳ್ಳಿ ತಾಲೂಕಿನಲ್ಲಿ ಗೋ ಕಳ್ಳತನ ಮತ್ತು ಸಾಗಾಟ ಹೆಚ್ಚಾಗಿದ್ದು ಈ ಬಗ್ಗೆ ಅಧಿಕಾರಿಗಳು ಕಣ್ಮುಚ್ಚಿ ಕುಳಿತಂತೆ ಕಾಣಿಸುತ್ತಿದೆ.
ಕಟ್ಟೆಹಕ್ಕಲಿನ ಗಣಪತಿ ದೇವಸ್ಥಾನದ ಹತ್ತಿರ ರಿಟ್ಜ್ ಕಾರೊಂದಕ್ಕೆ ಗೋವುಗಳನ್ನು ಅಕ್ರಮವಾಗಿ ತುಂಬಿಕೊಂಡು ಹೋಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈಗಾಗಲೇ ಈ ವಿಚಾರದಲ್ಲಿ ಹಲವಾರು ಅಧಿಕಾರಿಗಳ ಮೇಲೆ ಅನುಮಾನ ವ್ಯಕ್ತವಾಗಿ ಪ್ರತಿಭಟನೆಗಳು ಸಹ ನಡೆದಿವೆ. ಆದರೂ ಗೋ ಕಳ್ಳತನ ನಡೆಯುತ್ತಲೇ ಇದ್ದು ಈ ವಿಚಾರದಲ್ಲಿ ಅಧಿಕಾರಿಗಳು ಮೌನ ವಹಿಸಿರುವುದು ಕಾಣಿಸುತ್ತಿದೆ.
Tags:
ತೀರ್ಥಹಳ್ಳಿ ಸುದ್ದಿ