ತೀರ್ಥಹಳ್ಳಿ ಮುಖ್ಯ ರಸ್ತೆಯಲ್ಲಿ ಅಪಘಾತ- ಓರ್ವ ಸಾವು- ಮತ್ತೊರ್ವ ಗಂಭೀರ..!
ಶಿವಮೊಗ್ಗ: ತೀರ್ಥಹಳ್ಳಿ ಮುಖ್ಯರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು ಹಿಂಬದಿ ಸವಾರ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.
ಹೊಸ ಹೊನ್ನಾಪುರ ಗ್ರಾಮದ ರಸ್ತೆಯಲ್ಲಿ ಶಬೀರ್ ಅಹಮದ್ ಅವರು ತಮ್ಮ ಬೈಕ್‌ನಲ್ಲಿ ಸ್ನೇಹಿತ ಕೆ.ಎಂ. ಅಜೀಜುದ್ದೀನ್ ಅವರನ್ನು ಕೂರಿಸಿಕೊಂಡು ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ವೇಗವಾಗಿ ಬಂದ ಟಾಟಾ ಪಂಚ್ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ತಕ್ಷಣ ಶಿವಮೊಗ್ಗದ ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಶಬೀರ್ ಅಹಮದ್ ಅವರು ಕೊನೆಯುಸಿರೆಳೆದಿದ್ದಾರೆ.
ಶಿವಮೊಗ್ಗದ ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags:
ಅಪಘಾತ ಸುದ್ದಿ