ಶಿವರಾಜಪುರ ಬಳಿ ಅಪಘಾತ - ಓರ್ವ ಸಾ*ವು ! tth.

ಶಿವರಾಜಪುರ ಬಳಿ ಅಪಘಾತ - ಓರ್ವ ಸಾ*ವು !

ತೀರ್ಥಹಳ್ಳಿ : ರಸ್ತೆ ಬದಿಯಲ್ಲಿ ಕಾರನ್ನು ನಿಲ್ಲಿಸಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವನಿಗೆ ಮತ್ತೊಂದು ಕಾರು ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಾಳೆಬೈಲು ಸಮೀಪದ ಶಿವರಾಜಪುರ ಬಳಿ ನಡೆದಿದೆ.

ರಮೇಶ್ ಮೃತಪಟ್ಟ ದುರ್ದೈವಿ. ಕೆಟ್ಟು ನಿಂತಿದ್ದ ಕಾರನ್ನು ರಮೇಶ್ ಸರಿ ಮಾಡುತ್ತ ಇದ್ದರು. ಆದರೆ ಯಮನ ಸ್ವರೂಪದಲ್ಲಿ ಬಂದ ಮತ್ತೊಂದು ಕಾರು ಟಯರ್ ಬ್ಲಾಸ್ಟ್ ಆಗಿ ನಿಯಂತ್ರಣಕ್ಕೆ ಸಿಗದೇ ರಮೇಶ್ ಅವರು ಕೆಲಸ ಮಾಡುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಕೆಲಸ ಮಾಡುತ್ತಿದ್ದ ರಮೇಶ್ ಅವರಿಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಯಿತು.

ಆದರೆ ಮಾರ್ಗ ಮಧ್ಯದಲ್ಲಿ ಅಸುನೀಗಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ..
Previous Post Next Post