"ದೀಪದ ಬೆಳಕಿನಲ್ಲಿ ದೇವರ ದರ್ಶನ" ಪಡೆದ ಭಕ್ತರು
ತೀರ್ಥಹಳ್ಳಿ : ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಪುಷ್ಯ ಮಾಸದ ಶುದ್ಧ ಹುಣ್ಣಿಮೆಯ
ಧನುರ್ಮಾಸದ ಆರಿದ್ರಾ ನಕ್ಷತ್ರದ ಅಂಗವಾಗಿ ಆರ್ದ್ರೋತ್ಸವ ಎಂಬ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದ ಅಂಗವಾಗಿ ರಾಮೇಶ್ವರ
ದೇವರ ಸನ್ನಿಧಿಯಲ್ಲಿ 5.45 ರಿಂದ 6.30ರ ವರೆಗೆ ಅಭಿಷೇಕ, ಅಲಂಕಾರ, ಮಹಾಮಂಗಳಾರತಿ ನಡೆಯಿತು ಈ ವೇಳೆ "ದೀಪದ ಬೆಳಕಿನಲ್ಲಿ ದೇವರ ದರ್ಶನವೆಂಬ" ವಿಶಿಷ್ಟ ರೀತಿಯಲ್ಲಿ ಕಾರ್ಯಕ್ರಮ ಆಚರಿಸಲಾಯಿತು.
ಪ್ರಧಾನ ತಂತ್ರಿಗಳಾದ ಲಕ್ಷ್ಮೀಶ್ ತಂತ್ರಿಗಳು ಹಾಗೂ ಪ್ರಧಾನ ಅರ್ಚಕರಾದ ರಾಜಶೇಖರ್ ಭಟ್ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಧಾರ್ಮಿಕ ಕಾರ್ಯದಲ್ಲಿ ಭಕ್ತರು ಭಾಗವಹಿಸಿ ಶ್ರೀ ದೇವರ ಕೃಪೆ ಗೆ ಪಾತ್ರರಾದರು..
Tags:
ರಾಮೇಶ್ವರ ದೇವಸ್ಥಾನ