ತೀರ್ಥಹಳ್ಳಿಯಲ್ಲಿ ಬಾಲ ಕಾರ್ಮಿಕರಿಂದ ಕೆಲಸ..! ಮೌನ ವಹಿಸಿರುವ ಕಾರ್ಮಿಕ ಇಲಾಖೆ..! tth

ತೀರ್ಥಹಳ್ಳಿಯಲ್ಲಿ ಬಾಲ ಕಾರ್ಮಿಕರಿಂದ ಕೆಲಸ..! ಮೌನ ವಹಿಸಿರುವ ಕಾರ್ಮಿಕ ಇಲಾಖೆ..!

ತೀರ್ಥಹಳ್ಳಿ : ಪಟ್ಟಣದಲ್ಲಿ ಬಾಲಕಾರ್ಮಿಕರಿಂದ ಕೆಲಸ ಮಾಡಿಸಿಕೊಳ್ಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದಿದೆ. ಪಟ್ಟಣದ ಕೆಲವು ಹೋಟೆಲ್ ಹಾಗೂ ಇತರ ಕಡೆ 18 ವರ್ಷದ ಒಳಗಿನ ಮಕ್ಕಳನ್ನು ಕೆಲಸಕ್ಕೆ ಇಟ್ಟುಕೊಂಡಿದ್ದು ಈ ಬಗ್ಗೆ ಸಾರ್ವಜನಿಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ತೀರ್ಥಹಳ್ಳಿಯಲ್ಲೊಂದು ಕಾರ್ಮಿಕ ಇಲಾಖೆ ಎಂಬುದು ಇದೆ ಬಿಟ್ಟರೆ ಯಾವುದೇ ಕೆಲಸ ನಿರ್ವಹಿಸುತ್ತಿಲ್ಲ. ಅದರಲ್ಲಿ ಇರುವ ಅಧಿಕಾರಿ ವಾರಕ್ಕೊಮ್ಮೆ ಭೇಟಿ ನೀಡುತ್ತಾರೆ. ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಕೆಲಸ ನಿರ್ವಹಿಸುವುದು ಆಗಿದೆ. 
ಸರ್ಕಾರ ಉಚಿತ ಶಿಕ್ಷಣ ನೀಡುತ್ತಿದೆ. ಆದರೂ ಸಹ ಈ ರೀತಿ ಘಟನೆ ನಡೆಯುತ್ತಿರುವ ಬಗ್ಗೆ ತೀವ್ರ ಅಕ್ಷೇಪ ವ್ಯಕ್ತವಾಗಿದೆ.

ಕೂಡಲೇ ಸಂಬಂಧಪಟ್ಟಂತಹ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳು ತೀರ್ಥಹಳ್ಳಿಯ ಹಲವು ಕಡೆ ಭೇಟಿ ನೀಡಿ ಪರಿಶೀಲನೆ ನಡೆಸಿ ಕೆಲಸ ನಿರ್ವಹಿಸುತ್ತಿರುವ ಬಾಲಕಾರ್ಮಿಕರನ್ನು ರಕ್ಷಿಸಬೇಕೆಂದು ಸಾರ್ವಜನಿಕರು ತಿಳಿಸಿದ್ದಾರೆ.
Previous Post Next Post