ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಗೆ ಬೆಂಕಿ ..! hulikal

ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್ ಗೆ ಬೆಂಕಿ ..!

ತೀರ್ಥಹಳ್ಳಿ : ಕುಂದಾಪುರದಿಂದ ಶಿವಮೊಗ್ಗ ಹೋಗುತ್ತಿದ್ದ ಖಾಸಗಿ ಬಸ್ ಗೆ ಏಕಾಏಕಿ ಬೆಂಕಿ ಹತ್ತಿಕೊಂಡ ಘಟನೆ ಹುಲಿಕಲ್ ಘಾಟಿಯಲ್ಲಿ ನಡೆದಿದೆ. ಬೆಂಕಿ ಸಂಪೂರ್ಣ ಬಸ್ ಗೆ ಹತ್ತಿಕೊಂಡ ಪರಿಣಾಮ ಸಂಪೂರ್ಣ ಸುಟ್ಟು ಕರಕಲು ಆಗಿದೆ.

ಮಧ್ಯಾಹ್ನ ಕುಂದಾಪುರದಿಂದ ಶಿವಮೊಗ್ಗ ಹೋಗುತ್ತಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ನಂತರ ಸಂಪೂರ್ಣ ಬಸ್ ಗೆ ಬೆಂಕಿ ಆವರಿಸಿದೆ. ಬಸ್ ನಲ್ಲಿ ಹಲವು ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದರು. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆ ಆಗಿಲ್ಲ. ಎಲ್ಲರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಬೆಂಕಿ ಹತ್ತಿಕೊಂಡಿದ್ದು ಹೇಗೆ ಎಂಬುದೇ ಪ್ರೆಶ್ನೆ ಆಗಿ ಉಳಿದಿದೆ.

ಬಸ್ ಸಂಪೂರ್ಣ ಸುಟ್ಟು ಕರಕಲು ಆಗಿದೆ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ..




Previous Post Next Post