ಮೇಗರವಳ್ಳಿಯಲ್ಲಿ ನಡೆದ ಅಪಘಾತ - ಮಹಿಳೆ ಸಾವು..!
ತೀರ್ಥಹಳ್ಳಿ : ಇಂದು ಬೆಳಿಗ್ಗೆ ಮೇಗರವಳ್ಳಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಂಪತಿಗಳಲ್ಲಿ ಮಹಿಳೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಬಲಭಾಗದಲ್ಲಿ ನಿಂತಿದ್ದ ಕಾರಿಗೆ ಹಿಂಬದಿಯಿಂದ ಅದರಲ್ಲೂ ಅತೀ ವೇಗವಾಗಿ ಬಂದ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಅದರಲ್ಲಿದ್ದ ದಂಪತಿಗಳು ಗಂಭೀರವಾಗಿ ಗಾಯಗೊಂಡಿದ್ದರು ಅವರನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ತಲೆಗೆ ಪೆಟ್ಟು ಬಿದ್ದಿದ್ದ ಮಲ್ಲಿಕಾ ಎಂಬುವರುಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ..
Tags:
ಅಪಘಾತ ಸುದ್ದಿ