ಸಾಗರ ಮಾರಿಕಾಂಬಾ ದೇವಿ ದರ್ಶನದ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅಸ್ವಸ್ಥ
ಸಾಗರ : ಇಂದಿನಿಂದ ಆರಂಭವಾಗಿರುವ ಸಾಗರ ಶ್ರೀ ಮಾರಿಕಾಂಬಾ ಜಾತ್ರಾ ಮಹೋತ್ಸವದಲ್ಲಿ ಮಾರಿಕಾಂಬಾ ದೇವಿ ದರ್ಶನದ ವೇಳೆ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದಾರೆ. ದೇವಿಯ ದರ್ಶನ ಪಡೆಯುತ್ತಿದ್ದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ.
ಜಾತ್ರೆಯ ಮೊದಲ ದಿನವಾದ ಇಂದು ತಾಯಿಯ ದರ್ಶನ ಪಡೆಯಲು ಕಾಗೋಡು ತಿಮ್ಮಪ್ಪನವರು ಆಗಮಿಸಿದ್ದರು.
ದೇವಸ್ಥಾನದಲ್ಲಿ ದರ್ಶನ ಪಡೆಯುತ್ತಿದ್ದ ವೇಳೆ ಅವರಿಗೆ ತೀವ್ರ ಸುಸ್ತು ಉಂಟಾಗಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಕಾರ್ಯಕರ್ತರು ಹಾಗೂ ಸ್ಥಳೀಯರು ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಸದ್ಯಕ್ಕೆ ಹಿರಿಯ ನಾಯಕ ಕಾಗೋಡು ತಿಮ್ಮಪ್ಪ ಚೇತರಿಕೊಳ್ಳತ್ತಿದ್ದಾರೆ ಎಂದು ತಿಳಿದು ಬಂದಿದೆ.
Tags:
ಸಾಗರ ಸುದ್ದಿ