ಸಕ್ರೆಬೈಲು ಬಳಿ ಭೀಕರ ಅಪಘಾತ - ಸ್ಥಳದಲ್ಲೇ ಓರ್ವ ಸಾವು ಮತ್ತೊರ್ವರ ಸ್ಥಿತಿ ಗಂಭೀರ..!
ತೀರ್ಥಹಳ್ಳಿ : ರಸ್ತೆ ಅಪಘಾತವಾಗಿ ಓರ್ವ ಸಾವನ್ನಪ್ಪಿ ಮತ್ತೊರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಸಕ್ರೆಬೈಲು ಬಳಿ ನಡೆದಿದೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟೊ ಕಾರ್ ನಡುವೆ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಮತ್ತೊರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ಸಿನ ಮುಂಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಬಲ ಭಾಗಕ್ಕೆ ಹೋಗಿ ಬಸ್ಸಿಗೆ ಡಿಕ್ಕಿ ಹೊಡೆದಿರುವುದರಿಂದ ಇಲ್ಲಿ ಕಾರಿನವರದ್ದೇ ತಪ್ಪು ಎಂದು ಸ್ಥಳೀಯರು ತಿಳಿಸಿದ್ದಾರೆ.
Tags:
ಅಪಘಾತ ಸುದ್ದಿ