ವಾಗ್ದೇವಿಯ ದಿತಿ ಹೆಚ್.ಎಸ್ ಭರತನಾಟ್ಯ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
ತೀರ್ಥಹಳ್ಳಿ : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ವಿಭಾಗದಲ್ಲಿ ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಕಲಾ ನೈಪುಣ್ಯವನ್ನು ವೃದ್ಧಿಗೊಳಿಸಲು ಪ್ರೋತ್ಸಾಹ ನೀಡುವ ಸಲುವಾಗಿ ಹಮ್ಮಿಕೊಂಡಿದ್ದ ವಲಯ ಮಟ್ಟದ ಕಲಾ ಪ್ರತಿಭೋತ್ಸವ ಕಾರ್ಯಕ್ರಮದಲ್ಲಿ ವಾಗ್ದೇವಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ದಿತಿ ಎಚ್.ಎಸ್ ಭಾಗವಹಿಸಿ ಕಿಶೋರ ಪ್ರತಿಭೆ ಶಾಸ್ತ್ರೀಯ ನೃತ್ಯ ಪ್ರಕಾರದಲ್ಲಿ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟದ ಕಲಾಪ್ರತಿಭೋತ್ಸವಕ್ಕೆ ಆಯ್ಕೆಯಾಗಿದ್ದಾಳೆ.
ಈ ರಾಜ್ಯಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮವು ದಿನಾಂಕ 13.02.2026 ರಂದು ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯುತ್ತದೆ. ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ವಿದ್ಯಾರ್ಥಿನಿಯು ಆರಕ್ಷಕ ಇಲಾಖೆಯಲ್ಲಿ ಸೇವೆಯನ್ನು ಸಲ್ಲಿಸುತ್ತಿರುವ ಸುರೇಶ್ ಹಾಗೂ ವಾಗ್ದೇವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಅಕ್ಷತಾ ದಂಪತಿಗಳ ಪುತ್ರಿಯಾಗಿದ್ದಾಳೆ.
ಈ ವಿದ್ಯಾರ್ಥಿನಿಯು ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನವನ್ನು ಪಡೆದು ತಾಲ್ಲೂಕಿಗೆ ಜಿಲ್ಲೆಗೆ ಕೀರ್ತಿಯನ್ನು ತರಲಿ ಎಂದು
ವಾಗ್ದೇವಿ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರು, ಸದಸ್ಯರು, ಶಿಕ್ಷಕರು ಹಾಗೂ ಪೋಷಕರು ಶುಭ ಹಾರೈಸಿರುತ್ತಾರೆ.
Tags:
ವಾಗ್ದೇವಿ ಸಂಸ್ಥೆ