ಕರ್ನಾಟಕದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ Social media ban in karnataka

ಕರ್ನಾಟಕದಲ್ಲಿ 16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ 

ರಾಜ್ಯ ಬಜೆಟ್‌ನಲ್ಲಿ ಅನೇಕ ಯೋಜನೆಗಳನ್ನು ಘೋಷಿಸಲಾಗಿದೆ. ಈ ನಡುವೆ ಮಕ್ಕಳ ಭವಿಷ್ಯದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಮಹತ್ವದ ಆದೇಶವೊಂದನ್ನೂ ಈ ಬಜೆಟ್‌ನಲ್ಲಿ ಹೊರಡಿಸಲಾಗಿದ್ದು, ಇದರ ಅನ್ವಯ ಇನ್ಮುಂದೆ 16 ವರ್ಷದ ಒಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್ ಮಾಡಲಾಗಿದೆ. ಶಾಲಾ ಮಕ್ಕಳ ಭವಿಷ್ಯ ಹಾಗೂ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

ಆಸ್ಟ್ರೇಲಿಯಾದಲ್ಲಿ ಈಗಾಗಲೇ ಜಾರಿಗೊಂಡ ನಿಯಮವನ್ನೇ ರಾಜ್ಯ ಸರ್ಕಾರವೂ ಜಾರಿಗೊಳಿಸಿದ್ದು, ಇದರ ಅನ್ವಯ ಮಕ್ಕಳ ಫೇಸ್‌ಬುಕ್, ಇನ್ಸ್ಟಾ, ಯೂಟ್ಯೂಬ್ ಬಳಕೆಗೆ ನಿರ್ಬಂಧ ಹೇರಲಾಗಿದೆ. ಇತ್ತೀಚೆಗೆ ವಿದ್ಯಾರ್ಥಿಗಳು ಹಾಗೂ ಮಕ್ಕಳು ವಿಪರೀತವಾಗಿ ಸಾಮಾಜಿಕ ಜಾಲತಾಣವನ್ನು ಬಳಕೆ ಮಾಡುತ್ತಿದ್ದು, ಇದು ಮಾನಸಿಕ ಹಾಗೂ ದೈಹಿಕ ಆರೋಗ್ಯದ ಮೇಲೆ ತೀವ್ರ ನಕಾರಾತ್ಮಕ ಪರಿಣಾಮ ಬೀರುತ್ತಿದೆ. ಅಲ್ಲದೇ ದಿನಗಳೆದಂತೆ ಮಕ್ಕಳು ಸ್ಮಾರ್ಟ್‌ಫೋನ್‌ಗಳ ದಾಸರಾಗುತ್ತಿದ್ದಾರೆ. ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಇವುಗಳಿಂದಾಗುವ ಅಡ್ಡಪರಿಣಾಮಗಳನ್ನು ತಡೆಗಟ್ಟಲು ಈ ಆದೇಶ ಹೊರಡಿಸಲಾಗಿದೆ.


ಆಯವ್ಯಯ ಪತ್ರದಲ್ಲೇನಿದೆ?

ಹೆಚ್ಚುತ್ತಿರುವ ಮೊಬೈಲ್ ಬಳಕೆಯಿಂದ ಮಕ್ಕಳ ಮೇಲೆ ಬೀರುವ ಅಡ್ಡ ಪರಿಣಾಮಗಳನ್ನು ತಡೆಗಟ್ಟುವ ಉದ್ದೇಶದಿಂದ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧಿಸಲಾಗುವುದು.
ಮಾದಕ ವಸ್ತುಗಳ ಮೇಲೂ ನಿರ್ಬಂಧ
ವಿದ್ಯಾರ್ಥಿಗಳ ಆರೋಗ್ಯ, ಭವಿಷ್ಯ ಮತ್ತು ವ್ಯಕ್ತಿತ್ವ ರೂಪಿಸುವ ಸ್ಥಳವಾಗಿರುವ ಶಾಲಾ-ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಮಾದಕ ವಸ್ತುಗಳ ಬಳಕೆಯನ್ನು ತಡೆಯಲು ವಿದ್ಯಾರ್ಥಿಗಳಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ, ಕಠಿಣ ನಿಯಮ ಹಾಗೂ ಸಹಾಯ ಕೇಂದ್ರಗಳ ಮೂಲಕ ಮಾದಕ ವಸ್ತುಗಳ ಮೇಲೆ ಕಟ್ಟುನಿಟ್ಟಿನ ನಿರ್ಬಂಧ ಹೇರಲಾಗುವುದು.




Previous Post Next Post