ಹಳ್ಳಕ್ಕೆ ಉರುಳಿ ಬಿದ್ದ ಖಾಸಗಿ ಬಸ್​; 30ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ Bus

ಹಳ್ಳಕ್ಕೆ ಉರುಳಿ ಬಿದ್ದ ಖಾಸಗಿ ಬಸ್​; 30ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರ ಸ್ಥಿತಿ ಗಂಭೀರ

ಭದ್ರಾವತಿ: ಖಾಸಗಿ ಬಸ್​​  ಹಳ್ಳಕ್ಕೆ ಉರುಳಿ ಬಿದ್ದು ಭೀಕರ ಅಪಘಾತ ಸಂಭವಿಸಿದೆ. ಭದ್ರಾವತಿ ತಾಲೂಕಿನಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಖಾಸಗಿ ಬಸ್ ಏಕಾಏಕಿ ಹಳ್ಳಕ್ಕೆ ಉರುಳಿ ಬಿದ್ದು, 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ದುರಂತ ಘಟನೆ ನಡೆದಿದೆ. ಈ ಅಪಘಾತದಿಂದ ಭಾರೀ ದೊಡ್ಡ ಅವಘಡವಾಗಿದ್ದು, ಹಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಗೆಹಳ್ಳ ಸಮೀಪದ ಹಳ್ಳಕ್ಕೆ ಬಸ್​ ಬಿದ್ದು ಅವಘಡ ಸಂಭವಿಸಿದೆ. ಸುಮಾರು ಮೂವತ್ತು ಜನಕ್ಕಿಂತಲೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಹಲವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಚನ್ನಗಿರಿಯಿಂದ ಭದ್ರಾವತಿಗೆ ಬರುತ್ತಿದ್ದ ಶ್ರೀ ರೇಣುಕಾಂಬ ಖಾಸಗಿ ಬಸ್ ಕಾಗೆಹಳ್ಳ ಬಳಿ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಹಳ್ಳಕ್ಕೆ ಉರುಳಿದೆ. ಬಸ್‌ನಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಇದ್ದರು. ಇದರಿಂದಾಗಿ ಅಪಘಾತದಲ್ಲಿ ಬಸ್ ತೀವ್ರವಾಗಿ ಹಾನಿಗೊಳಗಾಗಿದೆ. ಬಸ್ ಡ್ರೈವರ್ ನಿರ್ಲಕ್ಷದಿಂದ ಈ ಅಪಘಾತ ಸಂಭವಿಸಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.

ರಸ್ತೆಯಲ್ಲಿ ವೇಗವಾಗಿ ಬರುತ್ತಿದ್ದ ಬಸ್ ತಿರುವು ತಿರುಗುವಾಗ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಯಿಂದಾಗಿ ಬಸ್‌ನಲ್ಲಿ ಇದ್ದವರೆಲ್ಲರೂ ಗಾಯಗೊಂಡಿದ್ದಾರೆ. ಹಲವರಿಗೆ ತಲೆಗೆ ಗಾಯ, ಕೈ-ಕಾಲು ಮುರಿತ ಮತ್ತು ಇತರ ಗಂಭೀರ ಗಾಯಗಳಾಗಿವೆ.
ಗಂಭೀರ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಭದ್ರಾವತಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಡ್ರೈವರ್‌ನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ. ಪೊಲೀಸರು ಬಸ್ ಡ್ರೈವರ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.
Previous Post Next Post