ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ agumbe

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ 
 
ತೀರ್ಥಹಳ್ಳಿ : ಆಗುಂಬೆ ಘಾಟಿಯ ನಾಲ್ಕನೇ ಸುತ್ತಿನಲ್ಲಿ ಮರವೊಂದು ರಸ್ತೆಗೆ ಅಡ್ಡ ಬಿದ್ದ ಪರಿಣಾಮ ವಾಹನ ಸಂಚಾರ ಬಂದ್ ಆಗಿದೆ. ಇದರಿಂದ ತೀರ್ಥಹಳ್ಳಿ - ಉಡುಪಿ ಮಾರ್ಗವಾಗಿ ಹೋಗುತ್ತಿದ್ದ ವಾಹನಗಳು ಘಾಟಿಯ ಎರಡು ಕಡೆ ಟ್ರಾಫಿಕ್ ಜಾಮ್ ಆಗಿವೆ.

ಮರ ಸಂಪೂರ್ಣ ರಸ್ತೆಗೆ ಬಿದ್ದಿರುವ ಪರಿಣಾಮ ವಾಹನ ಸಂಚಾರ ಸಂಪೂರ್ಣ ಬಂದ್ ಆಗಿದೆ. ಸ್ಥಳದಲ್ಲಿ ಯಾವುದೇ ಅಧಿಕಾರಿಗಳು ಇನ್ನು ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಘಾಟಿಯಲ್ಲಿ ಓಡಾಟ ನಡೆಸುತ್ತಿದ್ದ ಲಾರಿ ಚಾಲಕರು ಮರ ತೆರವಿಗೆ ಪ್ರಯತ್ನ ಪಡುತ್ತಿದ್ದು ದೊಡ್ಡ ಮರ ಆಗಿರುವುದರಿಂದ ಮರ ತೆರವಿನ ಕಾರ್ಯ ಅಷ್ಟು ಸುಲಭ ಅಲ್ಲ ಎಂದು ಹೇಳಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ ಒಂದು ಘಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಬಹುದು ಎನ್ನಲಾಗುತ್ತಿದೆ..





Previous Post Next Post