ಚಳ್ಳಕೆರೆ ಬಳಿ ಅಪಘಾತ ಪ್ರಕರಣ - ತೀರ್ಥಹಳ್ಳಿ ಸಚಿನ್ ಸಾವು - ಶಾಸಕ ಆರಗ ಜ್ಞಾನೇಂದ್ರ ಸಂತಾಪ..! Araga

ಚಳ್ಳಕೆರೆ ಬಳಿ ಅಪಘಾತ ಪ್ರಕರಣ - ತೀರ್ಥಹಳ್ಳಿ ಸಚಿನ್ ಸಾವು - ಶಾಸಕ ಆರಗ ಜ್ಞಾನೇಂದ್ರ ಸಂತಾಪ..!

ತೀರ್ಥಹಳ್ಳಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 150ಎ ರಲ್ಲಿ  ಕಾರು ಮತ್ತು ಲಾರಿಯ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್‌ ಸಬ್‌ ಇನ್‌ಸ್ಪೆಕ್ಟರ್‌ಗಳು (ಆರ್‌ಎಸ್‌ಐ) ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಸಬ್‌ ಇನ್‌ಸ್ಪೆಕ್ಟರ್‌ಗಳು ತೀವ್ರವಾಗಿ ಗಾಯಗೊಂಡಿದ್ದಾರೆ. ಇದರಲ್ಲಿ ತೀರ್ಥಹಳ್ಳಿ ಮೂಲದ ಸಚಿನ್ (29 ವರ್ಷ)  ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ಕುಡುವಳ್ಳಿ ಗ್ರಾಮದ ವೆಂಕಟೇಶ್ ಗುಲಾಬಿ ದಂಪತಿಗಳ ಪುತ್ರನಾಗಿದ್ದ ಸಚಿನ್ ರಿಸರ್ವ್ ಪೊಲೀಸ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಬೇರೆ ಕಡೆ ಕೆಲಸದ ನಿಮಿತ್ತ ಹೋಗುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೇ 10 ರಂದು ಸಚಿನ್ ಅವರಿಗೆ ಮದುವೆ ನಿಶ್ಚಯ ಆಗಿತ್ತು. ಆದರೆ ವಿಧಿಯ ಆಟ ಸಚಿನ್ ಅವರ ಪ್ರಾಣವನ್ನೇ ಕಸಿದುಕೊಂಡಿತು. ಸಚಿನ್ ಅವರಿಗೆ ಓರ್ವ ಅಣ್ಣ ಇದ್ದು ಅವರು ಜೀ ಕನ್ನಡ ವಾಹಿನಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಶಾಸಕ ಆರಗ ಜ್ಞಾನೇಂದ್ರ ಸಂತಾಪ..

ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸಚಿನ್ ಅವರ ಸಾವಿನ ಸುದ್ದಿ ಕೇಳುತ್ತಿದ್ದಂತೆ ಶಾಸಕ ಆರಗ ಜ್ಞಾನೇಂದ್ರ ಸಂತಾಪ ಸೂಚಿಸಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಸಚಿನ್ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಆ ಭಗವಂತ ನೀಡಲಿ ಎಂದು ತಿಳಿಸಿದ್ದಾರೆ..







Previous Post Next Post