" ಬಿಂದು " ವಿನಪೋಸ್ಟ್ ಗಳಿಗೆ ಫುಲ್ ಸ್ಟಾಪ್ ಇಡಲು ಮುಂದಾದ ಬಿಜೆಪಿ ಯುವ ಮೋರ್ಚಾ bjp

"ಬಿಂದು"ವಿನ ಪೋಸ್ಟ್ ಗಳಿಗೆ ಫುಲ್ ಸ್ಟಾಪ್ ಇಡಲು ಮುಂದಾದ ಬಿಜೆಪಿ ಯುವ ಮೋರ್ಚಾ

ತೀರ್ಥಹಳ್ಳಿ : ಭಾರತ ಸರ್ಕಾರದ ಸನ್ಮಾನ್ಯ ಪ್ರಧಾನಮಂತ್ರಿಗಳ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಮಾನಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುವ 'ಬಿಂದು ಸಿರ' ಎಂಬುವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ತೀರ್ಥಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಬಿಂದು ಸಿರ ಎನ್ನುವವರು ಭಾರತ ಸರ್ಕಾರದ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರ ವಿರುದ್ಧ ಅವಮಾನಕಾರಿ
ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿದ್ದಾಳೆ. ಬಿಂದು ಸಿರ  ಈ ರೀತಿಯ ಪೋಸ್ಟ್‌ಗಳಿಂದ ಸಮಾಜದ ಸಾಮರಸ್ಯಕ್ಕೆ ಧಕ್ಕೆಯುಂಟಾಗುತ್ತಿದೆ. ಭಾರತ ಸರ್ಕಾರದ ಮುಖ್ಯಸ್ಥರೂ, ಸನ್ಮಾನ್ಯ ಪ್ರಧಾನ ಮಂತ್ರಿಗಳ ವಿರುದ್ಧ ಈ ರೀತಿಯ ಪೋಸ್ಟ್‌ಗಳನ್ನು ಹಂಚಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು, ಈ ಕೂಡಲೇ ಬಿಂದು ಸಿರಾ ಇವಳನ್ನು ಬಂಧಿಸಿ ಇವಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕಾಗಿ ತೀರ್ಥಹಳ್ಳಿ ಬಿಜೆಪಿ ಯುವ ಮೋರ್ಚಾವತಿಯಿಂದ ದೂರು ನೀಡಲಾಗಿದೆ.




Previous Post Next Post