ಕಾಂಗ್ರೆಸ್ ನಿಂದ ಇಬ್ಬರು ಉಚ್ಚಾಟನೆ
ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ನಾಜಿಮಾ ಹಾಗೂ ವೈ.ತಿಮ್ಮರಾಜು ಅವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಅಸ್ಮಾ ಬಾನು ಎಂಬುವರಿಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಮೂರು ಲಕ್ಷ ರೂ. ಹಣ ಪಡೆದು ಕಾಂಗ್ರೆಸ್, ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹಾಗೂ ವಿಧಾನ ಪರಿಷತ್ ಸದಸ್ಯೆ ಬಲ್ಕಿಷ್ ಬಾನು ಹೆಸರನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆ ನಾಜೀಮಾ ಹಾಗೂ ತಿಮ್ಮರಾಜು ವಿರುದ್ಧ ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹಾಗಾಗಿ ಇವರಿಬ್ಬರನ್ನೂ 6 ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟನೆ ಮಾಡಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಆರ್. ಪ್ರಸನ್ನಕುಮಾರ್ ಆದೇಶಿಸಿದ್ದಾರೆ.
Tags:
ಕಾಂಗ್ರೆಸ್ ಸುದ್ದಿ