ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು - ಕಾರಿನ ಮುಂಭಾಗ ಸಂಪೂರ್ಣ ಜಖಂ..! konanduru

ಹಿಂದಿನಿಂದ ಲಾರಿಗೆ ಡಿಕ್ಕಿ ಹೊಡೆದ  ಕಾರು - ಕಾರಿನ ಮುಂಭಾಗ ಸಂಪೂರ್ಣ ಜಖಂ..!

ತೀರ್ಥಹಳ್ಳಿ : ನಿಂತಿದ್ದ ಲಾರಿಯೊಂದಕ್ಕೆ ಹಿಂದಿನಿಂದ ಬಂದಂತಹ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡ ಘಟನೆ ಕೋಣಂದೂರಿನಲ್ಲಿ ನಡೆದಿದೆ.

ಕೋಣಂದೂರಿನ ವಿನಾಯಕ ಮಾಂಗಲ್ಯ ಮಂದಿರದ ಎದುರು ಖಾಲಿ ಲಾರಿಯೊಂದು ನಿಂತಿತ್ತು. ಹಿಂಭಾಗದಿಂದ ಬಂದ ಕಾರು ಚಾಲಕನ ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಚಾಲಕರಿಗೆ ಸ್ವಲ್ಪ ಪೆಟ್ಟಾಗಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ಕರೆದೋಯ್ಯಲಾಗಿದೆ. 

ಕೋಣಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ಜರುಗಿದೆ..
Previous Post Next Post