KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ- ಓರ್ವ ಸಾವು! shivamogga

KSRTC ಬಸ್ ಮತ್ತು ಬೈಕ್ ನಡುವೆ ಡಿಕ್ಕಿ- ಓರ್ವ ಸಾವು!

ಶಿವಮೊಗ್ಗ :  ಹೊಳಲೂರು ಬಳಿ KSRTC ಬಸ್ ಹಾಗೂ ಬೈಕ್ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಕಂಡಿರುವ ಘಟನೆ ತಡ ರಾತ್ರಿ ನಡೆದಿದೆ. 

ಶಿವಮೊಗ್ಗದಿಂದ ಹುಬ್ಬಳ್ಳಿಗೆ ಹೊರಟಿದ್ದ KSRTC  ಬಸ್ ಗೆ ಎದುರಿನಿಂದ ಬಂದ ಟಿವಿಎಸ್ ವಿಕ್ಟರ್ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಕೀರ್ತಿ ನಾಯ್ಕ್ 
( 46 ವರ್ಷ)  ವ್ಯಕ್ತಿ ಸ್ಥಳದಲ್ಲಿಯೇ ಸಾವು ಕಂಡಿದ್ದಾರೆ. 

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.





Previous Post Next Post