ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..! Sagara

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಕಾರ್ಗಲ್: ಸರ್ಕಾರಿ ಪ್ರಾಥಮಿಕ ಶಾಲೆಯ ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್ ಹೊಟ್ಟೆನೋವು ಮತ್ತು ವಾಂತಿಭೇದಿಯಿಂದ ಅಸ್ವಸ್ಥರಾಗಿದ್ದು ಕೂಡಲೇ ವಿದ್ಯಾರ್ಥಿಗಳನ್ನು ಶಿಕ್ಷಕರು ಸ್ಥಳೀಯ ಕೆಪಿಸಿ ಆಸ್ಪತ್ರೆಗೆ  ದಾಖಲಿಸಿದರು.

ಕೆಪಿಸಿ ಇಲಾಖೆಯ ವೈದ್ಯಾಧಿಕಾರಿ ತೇಜಸ್ವಿನಿ ಹಾಗೂ ಕಾರ್ಗಲ್ ಸರ್ಕಾರಿ ಆಸ್ಪತ್ರೆಯ ಡಾ. ಜೀಶಾಂತ ಪಾಟೀಲ್‌ರ ತಂಡ ವಿದ್ಯಾರ್ಥಿಗಳಿಗೆ ಅಗತ್ಯ ಚಿಕಿತ್ಸೆ ನೀಡಿದರು. 12 ದಿನದಿಂದ ಜೋಗ, ಕಾರ್ಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ನೂರಕ್ಕೂ ಹೆಚ್ಚು ಜನ ಹೊಟ್ಟೆನೋವು, ವಾಂತಿ-ಭೇದಿಯಿಂದ ನಿತ್ರಾಣಗೊಂಡಿದ್ದಾರೆ.

ಈ ಬಗ್ಗೆ ತನಿಖೆ ನಡೆಯುತ್ತಿದ್ದು ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆದೇಶದ ಪರಿಶೀಲನೆ ನಡೆಸಲಾಗುತ್ತಿದೆ.







Previous Post Next Post