ಕಲುಷಿತ ನೀರು ಕುಡಿದು ಮಹಿಳೆ ಸಾವು..!?
ಸಾಗರ : ಕಲುಷಿತ ನೀರು ಕುಡಿದು ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾರ್ಗಲ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಜಯಲಕ್ಷ್ಮಿ (65) ವರ್ಷ ಎಂದು ಗುರುತಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಯಲಕ್ಷ್ಮಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕಾರ್ಗಲ್ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 70 ಕ್ಕೂ ಹೆಚ್ಚು ಮಂದಿ ಆಸ್ಪತ್ರೆ ಸೇರಿದ್ದಾರೆ. 15 ಕ್ಕೂ ಹೆಚ್ಚು ಶಾಲಾ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾಗರ ತಾಲೂಕಿನ ಜೋಗದ ಕಾರ್ಗಲ್ ನಲ್ಲಿ ಕಲುಷಿತ ನೀರಿನಿಂದ ಹಲವರಿಗೆ ವಾಂತಿ, ಭೇದಿಯಿಂದ ಆಸ್ಪತ್ರೆ ಸೇರಿದ್ದಾರೆ. ಈಗಾಗಲೇ ಆರೋಗ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಲುಷಿತ ನೀರಿಗೆ ಕಾರಣವೇನು? ಎಂಬುದನ್ನು ಪರಿಶೀಲನೆ ನಡೆಸಲಾಗುತ್ತಿದೆ. ಈ ವಿಚಾರವಾಗಿ ಸೂಕ್ತ ಪರಿಶೀಲನೆ ನಡೆಸುವಂತೆ ಶಾಸಕ ಬೇಳೂರು ಗೋಪಾಲಕೃಷ್ಣ ಸಹ ಸೂಚನೆ ನೀಡಿದ್ದಾರೆ..
Tags:
ಸಾಗರ ಸುದ್ದಿ