ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ತಹಸೀಲ್ದಾರ್ ಭೇಟಿ
ತೀರ್ಥಹಳ್ಳಿ : ಮೇಗರವಳ್ಳಿಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಕ್ಕೆ ತಹಸೀಲ್ದಾರ್ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಂತರ ವಿದ್ಯಾರ್ಥಿಗಳ ಜೊತೆಗೆ ಬರುವ ಪರೀಕ್ಷೆ ವಿಚಾರಕ್ಕೆ ಸಂಬಂಧಪಟ್ಟಂತೆ ಹಾಗೂ ಹಾಸ್ಟೆಲ್ ವ್ಯವಸ್ಥೆ ಬಗ್ಗೆ ಮಾತುಕತೆ ನಡೆಸಿದರು.. ಮಕ್ಕಳಿಗೆ ಬೇಕಾದ ಅಗತ್ಯ ಸೌಲಭ್ಯ ಮತ್ತು ಕ್ರೀಡಾ ಪರಿಕರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು.
ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಭಯ ಪಡದೆ ಯಾವುದೇ ಉದ್ವೇಗಕ್ಕೆ ಒಳಗಾಗದೆ ಪರೀಕ್ಷೆ ಬರೆಯಿರಿ. ನಾಳೆಯ ಗೆಲುವಿಗೆ ಇಂದಿನ ಹೆಜ್ಜೆ ದಾರಿದೀಪ ಆಗಲಿದೆ ಎಂದು ಎಲ್ಲಾ ವಿದ್ಯಾರ್ಥಿಗಳಿಗೂ ಶುಭ ಹಾರೈಸಿದರು..
Tags:
ತೀರ್ಥಹಳ್ಳಿ ಸುದ್ದಿ