ಸಿದ್ದರಾಮಯ್ಯನವರ ಬಜೆಟ್ ನಲ್ಲಿ ತೀರ್ಥಹಳ್ಳಿಗೆ ವಿಶೇಷ ಮನ್ನಣೆ tth

ಸಿದ್ದರಾಮಯ್ಯನವರ ಬಜೆಟ್ ನಲ್ಲಿ ತೀರ್ಥಹಳ್ಳಿಗೆ ವಿಶೇಷ ಮನ್ನಣೆ

ತೀರ್ಥಹಳ್ಳಿ : ಕರ್ನಾಟಕ ಸರ್ಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರು 17ನೇ ಬಾರಿ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಈ ವೇಳೆ ತೀರ್ಥಹಳ್ಳಿ ಕ್ಷೇತ್ರಕ್ಕೊಂದು ವಿಶೇಷ ಮನ್ನಣೆ ನೀಡಿದ್ದಾರೆ.

ವಿಶ್ವದ ಪ್ರಸಿದ್ಧ ಸಾಹಿತಿಗಳು, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಡಾ.ಯು.ಆರ್.ಅನಂತಮೂರ್ತಿಯವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಅರಂಭಿಸುವುದಾಗಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದಾರೆ. ಡಾ.ಯು.ಆರ್.ಅನಂತಮೂರ್ತಿ ಮೂಲತಃ ತೀರ್ಥಹಳ್ಳಿಯ ಮೇಳಿಗೆ ಗ್ರಾಮದವರು. 

ಇನ್ನು ಮೇರು ಸಮಾಜವಾದಿ ನಾಯಕರಾದ ಶಾಂತವೇರಿ ಗೋಪಾಲಗೌಡರ ಹೆಸರನ್ನು ಬೆಂಗಳೂರಿನ ಪ್ರಸಿದ್ಧ ವಿಕ್ಟೋರಿಯಾ ಆಸ್ಪತ್ರೆಗೆ ಮರು ನಾಮಕರಣ ಮಾಡಲಾಗಿದೆ. ಶಾಂತವೇರಿ ಗೋಪಾಲಗೌಡರು ತಮ್ಮ ಕೊನೆಯ ದಿನಗಳನ್ನು ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಮತ್ತು ಅಲ್ಲಿಯೇ ಕೊನೆಯುಸಿರೆಳೆದಿದ್ದರು.

ಕಿಮ್ಮನೆ ರತ್ನಾಕರ್ ವಿಶೇಷ ಪ್ರಯತ್ನ

ಕಿಮ್ಮನೆ ರತ್ನಾಕರ್ ಅವರು ಶಿಕ್ಷಣ ಸಚಿವರಾಗಿದ್ದಾಗ ಡಾ.ಯು.ಆರ್.ಅನಂತಮೂರ್ತಿ ಅವರ ಹೆಸರನ್ನು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಇಡುವ ಮೂಲಕ ಗೌರವ ಸೂಚಿಸಿದ್ದರು.  ಆನಂತರ ಯು ಆರ್ ಅನಂತಮೂರ್ತಿ ಅವರ ಹೆಸರಿನಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸಲು ಪ್ರಮುಖ ಪಾತ್ರ ವಹಿಸಿದ್ದರು. 

ಕಿಮ್ಮನೆ ರತ್ನಾಕರ್ ಅವರ ವಿಶೇಷ ಪ್ರಯತ್ನದಿಂದ ತೀರ್ಥಹಳ್ಳಿ ಕ್ಷೇತ್ರಕ್ಕೆ ಈ ಬಾರಿಯ ಬಜೆಟ್ ನಲ್ಲಿ ವಿಶೇಷ ಮನ್ನಣೆ ದೊರೆತಂತೆ ಕಾಣಿಸುತ್ತಿದೆ..





Previous Post Next Post