ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ - ಅರಣ್ಯಾಧಿಕಾರಿಗಳ ಡೌಡು
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಸಮೀಪದ ಕುವೆಂಪು ಜೈವಿಕ ಅರಣ್ಯದಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿ ಬೆಂಕಿ ಹತ್ತಿಕೊಂಡಿದೆ.
ದೇವಂಗಿಯಿಂದ ಕುಪ್ಪಳ್ಳಿಯವರೆಗೂ ಕುವೆಂಪು ಜೈವಿಕ ಅರಣ್ಯ ಬರುತ್ತದೆ. ಅರಣ್ಯದ ಒಳಗಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ ನಿಂದ ಶಾರ್ಟ್ ಸರ್ಕ್ಯೂಟ್ ಆಗಿದ್ದು ತಕ್ಷಣವೇ ಸುತ್ತ ಮುತ್ತಲೂ ಬೆಂಕಿ ಹತ್ತಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ.
ಸುಡುವ ಬಿಸಿಲಿನ ಬೇಗೆಗೆ ಅರಣ್ಯಗಳಿಗೆ ಬೆಂಕಿ ಹತ್ತಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ..
Tags:
ತೀರ್ಥಹಳ್ಳಿ ಸುದ್ದಿ