ತೀರ್ಥಹಳ್ಳಿಯಲ್ಲಿ ಇಂಜಿನಿಯರ್‌ಗೆ ಬೆದರಿಸಿ ಹಣ ವಸೂಲಿ, - ದಾಖಲಾಯ್ತು ಪ್ರಕರಣ!
ತೀರ್ಥಹಳ್ಳಿ: ತಾಲೂಕಿನ ಹೊಳೆಕೊಪ್ಪ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೆರೆಗೆ ನೀರು ತುಂಬಿಸುವ ಕಾಮಗಾರಿ ವೇಳೆ ಇಂಜಿನಿಯರ್‌ಗೆ ಬೆದರಿಕೆ ಹಾಕಿ, ಹಣ ವಸೂಲಿ ಮಾಡಿದ ಘಟನೆ ನಡೆದಿದೆ. ಕಾಮಗಾರಿ ತಡೆಯುವುದಾಗಿ ಬೆದರಿಸಿ ರೂ.20,000 ಫೋನ್ ಪೇ ಮೂಲಕ ವರ್ಗಾಯಿಸಿಕೊಳ್ಳಲಾಗಿದೆ.
ಬಸವಾನಿ ಗ್ರಾಮದ ಹೊಳೆಕೊಪ್ಪ ಎಂಬಲ್ಲಿ ಕೆರೆಗೆ ನೀರು ತುಂಬಿಸುವ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದೆ. ಮಾರ್ಚ್ 4ರಂದು ಕಾಮಗಾರಿ ಸ್ಥಳಕ್ಕೆ ಫಾರ್ಚುನರ್ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಅಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಂಜಿನಿಯರ್ ಪ್ರವೀಣ್‌ಕುಮಾರ್ ಅವರ ಬಳಿ ಕಾಮಗಾರಿ ಬಗ್ಗೆ ತಗಾದೆ ತೆಗೆದಿದ್ದಾನೆ. ಅಲ್ಲದೆ ಗೂಗಲ್ ಪೇ ಮೂಲಕ ಎರಡು ಬಾರಿ ರೂ.10,000 ಹಣ ವರ್ಗಾಯಿಸಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಗುತ್ತಿಗೆದಾರ ಮಹೇಶ ಎಂಬುವವರು ದೂರು ನೀಡಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Tags:
ತೀರ್ಥಹಳ್ಳಿ ಸುದ್ದಿ