ಕರ್ನಾಟಕ ವಾಲಿಬಾಲ್ ತಂಡಕ್ಕೆ ಆಯ್ಕೆಯಾದ ತೀರ್ಥಹಳ್ಳಿ ಹುಡುಗ! tth

ಕರ್ನಾಟಕ ವಾಲಿಬಾಲ್ ತಂಡಕ್ಕೆ ಆಯ್ಕೆಯಾದ ತೀರ್ಥಹಳ್ಳಿ ಹುಡುಗ!

ತೀರ್ಥಹಳ್ಳಿ: ಮಾ.15 ರಿಂದ 20ರವರೆಗೆ ನಡೆಯಲಿರುವ ರಾಷ್ಟ್ರೀಯ ಮಟ್ಟದ ಯೂಥ್ ನ್ಯಾಷನಲ್ ವಾಲಿಬಾಲ್ ಪಂದ್ಯಾವಳಿಗೆ ತೀರ್ಥಹಳ್ಳಿ ಮೂಲದ ಶಬರೀಶ್ ಗೌಡ ಆಯ್ಕೆ ಆಗಿದ್ದಾರೆ.

ತೀರ್ಥಹಳ್ಳಿ ತಾಲೂಕಿನ ದಬ್ಬಣಗದ್ದೆ ಸಮೀಪದ ಹಾರೆಕೊಪ್ಪದ ರಂಜಿತಾ ಹಾಗೂ ಜಗದೀಶ್ ದಂಪತಿಗಳ  ಪುತ್ರರಾಗಿರುವ ಶಬರೀಶ್ ಬೆಂಗಳೂರು ಜಯನಗರದ ಸುರಾನಾ ಕಾಲೇಜಿನಲ್ಲಿ ಮೊದಲ ವರ್ಷದ ಬಿ.ಕಾಂ ಓದುತ್ತಿದ್ದಾರೆ. ಕ್ರೀಡಾ ಇಲಾಖೆ ಇವರನ್ನು ಆಯ್ಕೆ ಮಾಡಿದೆ. ಓಡಿಸ್ಸಾದಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ಪಂದ್ಯದಲ್ಲಿ  ಶಬರೀಶ್ ಭಾಗಿಯಾಗಲಿದ್ದಾರೆ. ಆಳ್ವಾಸ್ ಕಾಲೇಜಿನಲ್ಲಿ ತರಬೇತಿ ಕ್ಯಾಂಪ್ ಅಲ್ಲಿ ವಾಲಿಬಾಲ್ ತರಬೇತಿ ಪಡೆದಿದ್ದರು.






Previous Post Next Post