ನಾಬಳ ಅಚಲ ಹೆಗ್ಡೆ ನಿಧನ
ತೀರ್ಥಹಳ್ಳಿ : ತಾಲ್ಲೂಕಿನ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ, ಹೊನ್ನೇತ್ತಾಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ನಾಬಳ ಶಚಿಂದ್ರ ಹೆಗ್ಡೆ ಧರ್ಮಪತ್ನಿ ಅಚಲ ಹೆಗ್ಡೆ (52) ಮಂಗಳವಾರ ಮುಂಜಾನೆ ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಶಾಲಾ ಕಾಲೇಜು ದಿನಗಳಲ್ಲಿ ಅತ್ಯುತ್ತಮ ಕೋಕೋ ಆಟಗಾರ್ತಿಯಾಗಿ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಹೆಸರು ಮಾಡಿದ್ದ ಅಚಲ ಅವರು ಕೊಡಚಾದ್ರಿ ಮಹಿಳಾ ಪತ್ತಿನ ಸಹಕಾರ ಸಂಘ, ಅನಘ ಮಹಿಳಾ ಸಹಕಾರ ಸಂಘದ ನಿರ್ದೇಶಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಹಲವು ಸಂಘ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತ ಕ್ರಿಯಾಶೀಲರಾಗಿದ್ದರು. ಅವರು ಪತಿ, ಇಬ್ಬರು ಮಕ್ಕಳು, ಹಾಗೂ ಅಪಾರ ಬಂಧುವರ್ಗವನ್ನು ಅಗಲಿದ್ದಾರೆ.
Tags:
ನಿಧನ ಸುದ್ದಿ