ಮಹಿಳಾ ದಿನಾಚರಣೆ : ಸಮಾನ ಮನಸ್ಕ ವೇದಿಕೆ ವತಿಯಿಂದ ಸಾಧಕ ಮಹಿಳೆಯರಿಗೆ ಸನ್ಮಾನ
ತೀರ್ಥಹಳ್ಳಿ: ಮಹಿಳಾ ದಿನಾಚರಣೆಯ ಅಂಗವಾಗಿ ಹೊದಲ- ಅರಳಾಪುರ ಗ್ರಾ.ಪಂ.ವ್ಯಾಪ್ತಿಯಲ್ಲಿನ ವಿವಿಧ ಕ್ಷೇತ್ರಗಳ ಮಹಿಳಾ ಸಾಧಕರಿಗೆ ಹೊದಲ- ಅರಳಾಪು ಗ್ರಾಮದ ಮಹಿಳಾ ಸಮಾನ ಮನಸ್ಕ ವೇದಿಕೆ ವತಿಯಿಂದ ಸನ್ಮಾನಿಸಲಾಯಿತು.
ತಾಲೂಕಿನ ಹೊದಲದ ಅಂಬಾ ಮಿತ್ರ ನಾಟಕ ಮಂಡಳಿಯ ರಂಗಮಂದಿರದಲ್ಲಿ ನೆಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ತೀರ್ಥಹಳ್ಳಿ ಠಾಣೆಯ ಪೋಲಿಸ್ ಇನ್ಸ್‌ಪೆಕ್ಟರ್ ಸುಷ್ಮಾ ಮಾತನಾಡಿ ಮಹಿಳೆಯರಿಂದು ಸಮಾಜದ ಎಲ್ಲಾ ಕ್ಷೇತ್ರದಲ್ಲೂ ಸಾಧನೆ ಮಾಡುತ್ತ ಬಂದಿದ್ದಾರೆ, ಇಂತಹ ಪುರಸ್ಕಾರದಿಂದ ಮಹಿಳೆಯರಿಗೆ ಪ್ರೋತ್ಸಾಹ ನೀಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ತುಪ್ಪದಮನೆ ನಾಗಶ್ರೀ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ನಿಶ್ಚಿತಾ.ಟಿ.ಕೆ.ಮಾತನಾಡಿ ಮಹಿಳೆಯರಿಂದು ಸಮಾಜಕ್ಕೆ ನೀಡುತ್ತಿರುವ ಕೊಡುಗೆ ಅಪಾರ,ಎಲೆಮರೆಯ ಕಾಯಿಯಂತೆ ಸಾಧನೆ ಮಾಡುತ್ತಿರುವ ಮಹಿಳೆಯರಿಗೆ ಮಹಿಳಾ ದಿನಾಚಣೆಯಂದು ಸನ್ಮಾನ ಮಾಡುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ವೇದಿಕೆಯಲ್ಲಿ ತಾಲೂಕು ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಫೆಡರೇಶನ್ ಅಧ್ಯಕ್ಷೆ ಗಾಯತ್ರಿ ಎನ್.ಶೆಟ್ಟಿ ಹಾಗೂ ಹೊದಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಧ್ಯಾಯಿನಿ ಪವಿತ್ರ ಹೆಚ್.ಕೆ.ಸನ್ಮಾನ ಸ್ವೀಕರಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಹೊದಲ ಅರಳಾಪುರ ಗ್ರಾಮದ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ಹಾಗೂ ವಿವಿಧ ಕ್ಷೇತ್ರದ ಮಹಿಳೆಯರಿಗೆ ಪುರಸ್ಕರಿಸಲಾಯಿತು.ಇದೇ ಸಂದರ್ಭದಲ್ಲಿ ಮಹಿಳೆಯರಿಗೆ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು.
Tags:
ತೀರ್ಥಹಳ್ಳಿ ಸುದ್ದಿ