ಹುಲಿಕಲ್ ಘಾಟಿಯಲ್ಲಿ ನಡೆದ ದುರಂತ - ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಘೋಷಣೆ Hulikal

ಹುಲಿಕಲ್ ಘಾಟಿಯಲ್ಲಿ ನಡೆದ ದುರಂತ - ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಘೋಷಣೆ

ಹೊಸನಗರ:  ಹುಲಿಕಲ್ ಘಾಟಿಯಲ್ಲಿ ರಸ್ತೆ ಅಂಚಿನ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು ಹುಲಿಕಲ್ ಘಾಟಿ ತಿರುಗಿನಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿಯ ವೇಳೆ ಮಣ್ಣು ಕುಸಿದು ಮೂವರು ಕಾರ್ಮಿಕರು ಮೃತಪಟ್ಟ ಸುದ್ದಿ ಕೇಳಿ ದುಃಖವಾಯಿತು ಮೃತ ದುರ್ದೈವಿ ಕಾರ್ಮಿಕರ ಆತ್ಮಕ್ಕೆ ಚಿರಶಾಂತಿ ದೊರಕಲಿ ಅವರ ಕುಟುಂಬ ಸದಸ್ಯರಿಗೆ ನೋವು ಬರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ರಾಘವೇಂದ್ರ, ರಾಜು, ಮತ್ತು ಶಬ್ಬೀರ್ ಸಾವನ್ನಪ್ಪಿರುವ ದುರ್ದೈವಿಗಳು. ರಾಘವೇಂದ್ರ ಸ್ಥಳೀಯ ನಗರದ ನಿವಾಸಿಯಾಗಿದ್ದಾರೆ. ರಾಜು ಮತ್ತು ಶಬ್ಬೀರ್ ಹಾವೇರಿ ಜಿಲ್ಲೆಯವರಾಗಿದ್ದಾರೆ. ಉಳಿದ ಗಾಯಗೊಂಡವರಿಗೆ  ಯಾವ ರೀತಿ ಪರಿಹಾರದ ಬಗ್ಗೆ ಸರ್ಕಾರ ಕ್ರಮ‌ ತೆಗೆದುಕೊಳ್ಳಲಿದೆ ಕಾದು ನೋಡಬೇಕಿದೆ. 


Previous Post Next Post