ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು Car

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು

ಸಾಗರ : ಬಿ.ಹೆಚ್ ರಸ್ತೆಯ ಗಣಪತಿ ಕೆರೆ ಸಮೀಪ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ವರದಿಯಾಗಿದೆ. 

ಸಾಗರ ನಗರದ ಬೆಂಗಳೂರು-ಹೊನ್ನಾವರ ರಾಷ್ಟ್ರೀಯ ಹೆದ್ದಾರಿಯ ಗಣಪತಿ ಕೆರೆ ಸಮೀಪ ಅಪಘಾತವೊಂದು ಸಂಭವಿಸಿದೆ. ಶಿವಮೊಗ್ಗದಿಂದ ಶಿರಸಿ ಕಡೆಗೆ ಸಂಚರಿಸುತ್ತಿದ್ದ ಕಾರೊಂದು, ರಸ್ತೆ ಪಕ್ಕದಲ್ಲಿ ಇದ್ದಂತಹ ವಿದ್ಯುತ್ ಕಂಬವನ್ನು ತಪ್ಪಿಸಲು ಹೋಗಿ ನಿಯಂತ್ರಣ ಕಳೆದುಕೊಂಡು ನೇರವಾಗಿ ಚರಂಡಿಗೆ ಉರುಳಿ ಬಿದ್ದಿದೆ. 

ಅಪಘಾತದಲ್ಲಿ ಅದೃಷ್ಟವಶಾತ್ ಕಾರಿನಲ್ಲಿದ್ದ ಕುಟುಂಬದ ಸದಸ್ಯರಿಗೆ ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.





Previous Post Next Post