ಹುಲಿಕಲ್ ಘಾಟಿಯಲ್ಲಿ ಮಣ್ಣು ಕುಸಿತ: ಮೂವರು ಸಾವು ಶಂಕೆ, ನಾಲ್ವರಿಗೆ ಗಂಭೀರ !
ಶಿವಮೊಗ್ಗ : ಹುಲಿಕಲ್ ಘಾಟಿಯಲ್ಲಿ ಭಾರೀ ಮಣ್ಣು ಕುಸಿತ ಸಂಭವಿಸಿದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ಪ್ರಾಥಮಿಕ ಮಾಹಿತಿಗಳು ತಿಳಿಸಿವೆ. ಘಟನೆಯ ನಿಖರ ವಿವರಗಳು ಇನ್ನಷ್ಟೇ ಸ್ಪಷ್ಟವಾಗಬೇಕಿದೆ.
ಹುಲಿಕಲ್ ಘಾಟಿಯ ದೇವಸ್ಥಾನದ ತಿರುವಿನ ಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದ್ದು, ರಸ್ತೆ ಕಾಮಗಾರಿ ನಡೆಯುತ್ತಿದ್ದ ವೇಳೆ ಮಣ್ಣು ಜಾರಿದ ಪರಿಣಾಮ ಈ ಅವಘಡ ಸಂಭವಿಸಿರುವ ಸಾಧ್ಯತೆ ವ್ಯಕ್ತವಾಗಿದೆ. ಸ್ಥಳದಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಮಣ್ಣು ಕುಸಿದಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಆರಂಭವಾಗಿದೆ.
ಘಟನೆ ಬಗ್ಗೆ ಮಾಹಿತಿ ದೊರಕುತ್ತಿದ್ದಂತೆ ನಗರ ಪೊಲೀಸರು ಹಾಗೂ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ರಕ್ಷಣಾ ತಂಡಗಳು ಮಣ್ಣಿನಡಿಯಲ್ಲಿ ಸಿಲುಕಿರುವವರಿಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಿವೆ.
ಈ ಘಟನೆಗೆ ಸಂಬಂಧಿಸಿದಂತೆ ಇನ್ನಷ್ಟು ಅಧಿಕೃತ ಮಾಹಿತಿ ಹೊರಬರಬೇಕಿದ್ದು, ಸಾವಿನ ಸಂಖ್ಯೆ ಹಾಗೂ ನಾಪತ್ತೆಯಾದವರ ವಿವರಗಳು ಸ್ಪಷ್ಟವಾಗಬೇಕಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Tags:
ಹುಲಿಕಲ್