ಮನೆಯಲ್ಲಿದ್ದ ಲಕ್ಷಾಂತರ ರೂ ಮೊತ್ತದ ಒಡವೆ ಕಳ್ಳತನ tth

ಮನೆಯಲ್ಲಿದ್ದ ಲಕ್ಷಾಂತರ ರೂ ಮೊತ್ತದ ಒಡವೆ ಕಳ್ಳತನ
ತೀರ್ಥಹಳ್ಳಿ : ಕುಟುಂಬಸ್ಥರು ಮದುವೆ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ವೆಚ್ಚದ ಒಡವೆ ಕಳ್ಳತನ ಮಾಡಿರುವ ಘಟನೆ ಗುತ್ತಿಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.

ತೂದೂರು ಸಮೀಪದ ಗುತ್ತಿಯಡೇಹಳ್ಳಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಸುಮಾರು 25 ಲಕ್ಷ ವೆಚ್ಚದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮನೆಯಲ್ಲಿ ಮದುವೆ ಕಾರ್ಯಕ್ರಮಕ್ಕೆ ಕುಟುಂಬದವರು ತೆರಳಿರುವ ಸಂದರ್ಭವನ್ನು ಗಮನಿಸಿದ ಕಳ್ಳರು ಮನೆಯಲ್ಲಿದ್ದ ಒಡವೆಗಳನ್ನು ಕದ್ದೊಯ್ದಿದ್ದಾರೆ. 

ಮನೆಯ ಬೀಗ ಮುರಿದು, ಕಪಾಟಿನಲ್ಲಿ ಇಟ್ಟಿದ್ದ ಒಡವೆಗಳನ್ನು ದೋಚಿದ್ದಾರೆ.  ಸುಮಾರು 25 ಲಕ್ಷ ರೂ ವೆಚ್ಚದ ಆಭರಣಗಳು ಕಳ್ಳತನ ಆಗಿದೆ ಎಂದು ಅಂದಾಜಿಸಲಾಗಿದ್ದು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







Previous Post Next Post