ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ tth

ತೀರ್ಥಹಳ್ಳಿಯಲ್ಲಿ ಅಕ್ರಮ ಮರಳು ಸಾಗಣೆ ವಿರುದ್ಧ ದಾಳಿ : 150 ಟನ್‌ಗೂ ಅಧಿಕ ಮರಳು ಜಪ್ತಿ

ತೀರ್ಥಹಳ್ಳಿ : ತಾಲ್ಲೂಕಿನ ಅಗ್ರಹಾರ ಹೋಬಳಿಯ ಅಗಳಬಾಗಿಲು ಗ್ರಾಮದ ಸದಾಶಿವ ದೇವಸ್ಥಾನದ ಸಮೀಪ ಸರ್ಕಾರಿ ಜಾಗದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಸುಮಾರು 150 ಟನ್‌ಗಿಂತ ಹೆಚ್ಚಿನ ಮರಳನ್ನು ತಹಸೀಲ್ದಾರ್ ರಂಜಿತ್ ಅವರ ನೇತೃತ್ವದಲ್ಲಿ ದಾಳಿ ನಡೆಸಿ ಜಪ್ತಿ ಮಾಡಲಾಯಿತು.

20-05-2026 ರಂದು ನಡೆದ ಕಾರ್ಯಾಚರಣೆಯಲ್ಲಿ ಜೆಸಿಬಿ ಯಂತ್ರದ ಸಹಾಯದಿಂದ ಸ್ಥಳ ಪರಿಶೀಲನೆ ನಡೆಸಿ ಅಕ್ರಮ ಮರಳು ಸಂಗ್ರಹವನ್ನು ವಶಕ್ಕೆ ಪಡೆಯಲಾಯಿತು. ಸರ್ಕಾರದ ಜಾಗವನ್ನು ದುರುಪಯೋಗಪಡಿಸಿಕೊಂಡು ಮರಳು ಸಂಗ್ರಹಿಸಿರುವ ಬಗ್ಗೆ ಮಾಹಿತಿ ದೊರಕಿದ ಹಿನ್ನೆಲೆ ತಕ್ಷಣ ಕಾರ್ಯಾಚರಣೆ ಕೈಗೊಳ್ಳಲಾಯಿತು.

ಕಾರ್ಯಾಚರಣೆಯಲ್ಲಿ ಪಿಡಿಒ ಮಂಜುನಾಥ್, ಗ್ರಾಮ ಆಡಳಿತಾಧಿಕಾರಿ ಸಿದ್ದರೂಢ ಹಾಗೂ ಸ್ಥಳೀಯ ಅಧಿಕಾರಿಗಳು ಉಪಸ್ಥಿತರಿದ್ದರು. ಅಕ್ರಮ ಮರಳು ಸಾಗಣೆ ಮತ್ತು ಸಂಗ್ರಹದ ವಿರುದ್ಧ ಮುಂದೆಯೂ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ರಂಜಿತ್ ತಿಳಿಸಿದ್ದಾರೆ.






Previous Post Next Post