ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಪರ ಹೋರಾಟ - ಟೈರ್‌ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ protest

ಶಿವಮೊಗ್ಗದಲ್ಲಿ ಸಿದ್ದರಾಮಯ್ಯ ಪರ ಹೋರಾಟ -  ಟೈರ್‌ಗೆ ಬೆಂಕಿ ಹಚ್ಚಿ  ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಆಕ್ರೋಶ 

ಶಿವಮೊಗ್ಗ: ಸಿದ್ದರಾಮಯ್ಯ ಅವರನ್ನು ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಮುಂದುವರೆಸಬೇಕು ಎಂದು ಆಗ್ರಹಿಸಿ ಕುರುಬ ಸಮುದಾಯದ ವತಿಯಿಂದ ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಲಾಯಿತು.  ಶಿವಪ್ಪನಾಯಕ ಪ್ರತಿಮೆ ಮುಂದೆ ಪ್ರತಿಭಟನೆ ನಡೆಯಿತು.

ಸಿದ್ದರಾಮಯ್ಯ ಅವರು ಅಹಿಂದ ವರ್ಗವನ್ನು ಒಗ್ಗೂಡಿಸಿದ್ದರು. ಅವರ ನಾಯಕತ್ವದ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬಂದಿದೆ. ಈಗ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನ ತೊರೆಯಬೇಕು ಎಂದು ಸೂಚಿಸಲಾಗಿದೆ. ಕಾಂಗ್ರೆಸ್‌ ಹೈಕಮಾಂಡ್‌ ಈ ನಿರ್ಧಾರದಿಂದ ಹಿಂದೆ ಸರಿಯಬೇಕು. ಸಿದ್ದರಾಮಯ್ಯ ಅವರನ್ನೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿ ಮುಂದುವರೆಸಬೇಕು ಎಂದು ಆಗ್ರಹಿಸಿದರು.

ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಿರುವುದಕ್ಕೆ ಹಿಂದುಳಿದ ವರ್ಗಗಳ ವಿರೋಧವಿದೆ.  ಕಪ್ಪು ಚುಕ್ಕೆ ಇಲ್ಲದೆ ಆಡಳಿತ ನಡೆಸಿದ್ದರು. ಪಂಚ ಗ್ಯಾರಂಟಿಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದರು. ಆದ್ದರಿಂದ ಹೈಕಮಾಂಡ್‌ ಸಿದ್ದರಾಮಯ್ಯ ಅವರನ್ನು ಐದು ವರ್ಷ ಸಿಎಂ ಸ್ಥಾನದಲ್ಲಿ ಮುಂದುವರೆಸಬೇಕು ಎಂದು ಆಗ್ರಹಿಸಿದರು..





Previous Post Next Post