ಅಕ್ರಮ ಮರಳುಗಾರಿಕೆ ದೂರಿನ ಹಿನ್ನಲೆ ತೀರ್ಥಹಳ್ಳಿ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ Raid

ಅಕ್ರಮ ಮರಳುಗಾರಿಕೆ ದೂರಿನ ಹಿನ್ನಲೆ ತೀರ್ಥಹಳ್ಳಿ ಸೇರಿ ಹಲವೆಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ 
ಶಿವಮೊಗ್ಗ : ಜಿಲ್ಲೆಯ ತೀರ್ಥಹಳ್ಳಿ, ಸಾಗರ ಹೊಸನಗರ, ಭದ್ರಾವತಿ,ಶಿವಮೊಗ್ಗ ಗ್ರಾಮಾಂತರ ಭಾಗಗಳಲ್ಲಿ ನಿರಂತರವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆಯ ವಿರುದ್ಧ ಸಾಕಷ್ಟು ದೂರು ಬಂದ ಹಿನ್ನೆಲೆಯಲ್ಲಿ ಮಾನ್ಯ ಲೋಕಾಯುಕ್ತ ನ್ಯಾಯಮೂರ್ತಿಗಳ ಆದೇಶದ ಮೇರೆಗೆ ಇಂದು ಶಿವಮೊಗ್ಗ ಜಿಲ್ಲೆಯಾದ್ಯಂತ 15 ಜನರ ತಂಡವನ್ನು  ಒಳಗೊಂಡ ಲೋಕಾಯುಕ್ತ ಅಧಿಕಾರಿಗಳು ವಿವಿಧ ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಗೂ ಭೇಟಿ ನೀಡಿ ಕಡತಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಜೊತೆಗೆ ಅಕ್ರಮವಾಗಿ ನಡೆಯುತ್ತಿರುವ ಮರಳುಗಾರಿಕೆಯ ಪ್ರದೇಶಗಳು ಹಾಗೂ ಸಂಗ್ರಹಿಸಿ ಇಟ್ಟಿರುವ ಮರಳು ಅಡ್ಡೆಗಳ ಮೇಲೆ ದಾಳಿ ನಡೆಸಿದ್ದು ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳಾದ ವಿಐ,  ಆರ್ ಐ, ತಹಸಿಲ್ದಾರ್, ಎಸಿ ಗ್ರಾಮ ಪಂಚಾಯಿತಿ ಅಧಿಕಾರಿಗಳನ್ನು ಕರೆಸಿಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ..
Previous Post Next Post