ಬೈಕ್ ನಲ್ಲಿ ಬರುತ್ತಿದ್ದಾಗ ಅಡಿಕೆ ಮರಕ್ಕೆ ಡಿಕ್ಕಿ ಹೊಡೆದು ವ್ಯಕ್ತಿ ಸಾವು
ತೀರ್ಥಹಳ್ಳಿ : ಬೈಕ್ ಚಲಾಯಿಸಿಕೊಂಡು ಬರುತ್ತಿದ್ದಾಗ ಏಕಾಏಕಿ ರಸ್ತೆಗೆ ಬಿದ್ದಂತಹ ಅಡಿಕೆ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಬಿದ್ದು ಸಾವನ್ನಪ್ಪಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ.
ತೀರ್ಥಹಳ್ಳಿಯ ಬಾಳಗಾರು ಸಮೀಪ ಈ ಅವಘಡ ಸಂಭವಿಸಿದ್ದು ಮಾಯಕ್ಕಣ್ಣನ್ 55 ವರ್ಷ ಮೃತಪಟ್ಟ ದುರ್ದೈವಿಯಾಗಿದ್ದಾರೆ. ತೀರ್ಥಹಳ್ಳಿ ಕಡೆ, ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ತಕ್ಷಣವೇ ಅವರನ್ನ ಆಸ್ಪತ್ರೆಗೆ ರವಾನೆ ಮಾಡಿದರು ಫಲಕಾರಿಯಾಗದೆ ಮೃತಪಟ್ಟಿದ್ದಾರೆ..
ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
Tags:
ಅಪಘಾತ ಸುದ್ದಿ