ಪಿಕಪ್ ಹಾಗೂ ಕ್ಯಾಂಟರ್ ನಡುವೆ ಅಪಘಾತ - 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ ..! Rippanpete

ಪಿಕಪ್ ಹಾಗೂ ಕ್ಯಾಂಟರ್ ನಡುವೆ ಅಪಘಾತ - 10 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ 

ರಿಪ್ಪನ್ ಪೇಟೆ : ರಿಪ್ಪನ್ ಪೇಟೆ ಸಮೀಪದ ಬಾಳೂರು ಬಳಿ  ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಹತ್ತಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಶಿಕಾರಿಪುರ ತಾಲೂಕಿನ ಓತಿನಕಟ್ಟೆ ಗ್ರಾಮದವರನ್ನು ಸಾಗಿಸುತ್ತಿದ್ದ ಬೊಲೆರೋ ಪಿಕಪ್ ವಾಹನವು ರಿಪ್ಪನ್ ಪೇಟೆ–ಆನಂದಪುರ ರಸ್ತೆಯಲ್ಲಿ ಸಂಚರಿಸುತ್ತಿದ್ದ ವೇಳೆ ಕ್ಯಾಂಟರ್ ಲಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೊಲೆರೋ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ವಾಹನದಲ್ಲಿದ್ದ ಹಲವರು ಗಾಯಗೊಂಡಿದ್ದಾರೆ.

ಗಾಯಳುಗಳನ್ನು ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳಲ್ಲಿ ಕೆಲವರ ಸ್ಥಿತಿ ಗಂಭೀರವಾಗಿರುವ ಹಿನ್ನೆಲೆಯಲ್ಲಿ ಕೆಲವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ..






Previous Post Next Post