ಬೇಳೂರು ಗೋಪಾಲಕೃಷ್ಣಗೆ ಮಂತ್ರಿ ಸ್ಥಾನ ಸಿಗುತ್ತಾ? ಡಿ.ಕೆ ಒಪ್ಪಿಗೆ ಸೂಚಿಸಿದ್ರಾ? ಏನಿದು ಸುದ್ದಿ...! Beluru Gopalakrishna

ಬೇಳೂರು ಗೋಪಾಲಕೃಷ್ಣಗೆ ಮಂತ್ರಿ ಸ್ಥಾನ ಸಿಗುತ್ತಾ? ಡಿ.ಕೆ ಒಪ್ಪಿಗೆ ಸೂಚಿಸಿದ್ರಾ? ಏನಿದು ಸುದ್ದಿ...!



ಸಾಗರ : ಸಾಗರ - ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬೇಲೂರು ಗೋಪಾಲಕೃಷ್ಣ ಅವರಿಗೆ ಡಿ.ಕೆ ಶಿವಕುಮಾರ್ ಸಚಿವ ಸಂಪುಟದಲ್ಲಿ ಮಂತ್ರಿ ಸ್ಥಾನ ಸಿಗುವುದು ಬಹುತೇಕ ಖಚಿತವಾದಂತೆ ಕಾಣಿಸುತ್ತಿದೆ.. ನಾಳೆ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು ಮುಖ್ಯಮಂತ್ರಿಗಳ ಜೊತೆಯಲ್ಲಿ ಹತ್ತಕ್ಕೂ ಹೆಚ್ಚು ಮಂತ್ರಿಗಳು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಇದರಲ್ಲಿ ಬೇಲೂರು ಗೋಪಾಲಕೃಷ್ಣ ಅವರು ಸಹ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂಬ ಮಾತುಗಳು ಈಗ ಕೇಳಿ ಬರುತ್ತಿದೆ..

ಬೇಳೂರು ಗೋಪಾಲಕೃಷ್ಣ ಅವರು ಈಗಾಗಲೇ ಹಲವು ಬಾರಿ ನಾನು ಮಂತ್ರಿಯಾಗಿರಬೇಕು ಎಂಬ ಆಸೆಯನ್ನ ಬಿಚ್ಚಿಟ್ಟಿದ್ದರು. ಈಗಿನ ಮಾಹಿತಿಯಂತೆ ಸಚಿವ ಸ್ಥಾನದ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ. ಅಲ್ಲದೆ ಮಂತ್ರಿ ಸ್ಥಾನ ಬಹುತೇಕ ಖಚಿತ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಈಗಾಗಲೇ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಬೇಳೂರು ಗೋಪಾಲಕೃಷ್ಣ ಅವರು ಈ ಬಾರಿ ಸಚಿವ ಸ್ಥಾನ ಪಡೆಯಲೇಬೇಕು ಎಂಬ ದೃಢ ನಿರ್ಧಾರದಲ್ಲಿದ್ದಾರೆ. 


ತಮ್ಮ ಹಿರಿತನ ಹಾಗೂ ಪಕ್ಷ ನಿಷ್ಠೆಯನ್ನು ಮುಂದಿಟ್ಟುಕೊಂಡು ಅವರು ತೀವ್ರ ಲಾಬಿ ನಡೆಸುತ್ತಿದ್ದಾರೆ. ದೆಹಲಿ ಮಟ್ಟದಲ್ಲಿ ತಮ್ಮ ಪ್ರಭಾವ ಬಳಸುತ್ತಿರುವ ಅವರು, ಸಚಿವ ಸ್ಥಾನದ ಆಕಾಂಕ್ಷಿಯಾಗಿ ಈಗಾಗಲೇ ಮೂರು ಬಾರಿ ರಾಷ್ಟ್ರ ರಾಜಧಾನಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಒತ್ತಡ ಹೇರಿದ್ದಾರೆ. ಈ ಬಗ್ಗೆ ಸ್ವತಃ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, “ನಾನು ಮೂರು ಬಾರಿ ಗೆದ್ದಿದ್ದೇನೆ, ಸಂಪುಟದಲ್ಲಿ ನನಗೊಂದು ಅವಕಾಶ ಖಂಡಿತವಾಗಿಯೂ ನೀಡಬೇಕು” ಎಂದು ಬಹಿರಂಗವಾಗಿಯೇ ತಮ್ಮ ಬೇಡಿಕೆಯನ್ನು ಹೈಕಮಾಂಡ್ ಮುಂದಿಟ್ಟಿದ್ದಾರೆ.

ಇತ್ತೀಚೆಗೆ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದ ಬೇಳೂರು ಗೋಪಾಲಕೃಷ್ಣ ಡಿಕೆಶಿ ಅವರಿಂದ ಮಂತ್ರಿಗಿರಿಯ ‘ಹಸಿರು ಸಿಗ್ನಲ್’ ಪಡೆದಿದ್ದಾರೆ ಎಂಬ  ಮಾಹಿತಿ ಈಗ ರಾಜಕೀಯ ವಲಯದಲ್ಲಿ ಹರಿದಾಡುತ್ತಿದೆ. ತಮ್ಮ ನೆಚ್ಚಿನ ನಾಯಕನಿಗೆ ಈ ಬಾರಿ ಸಚಿವ ಸ್ಥಾನ ಸಿಗಬೇಕು ಎಂದು ಸಾಗರ - ಹೊಸನಗರ ಭಾಗದ ಜನತೆ ಮತ್ತು ಅವರ ಅಪಾರ ಬೆಂಬಲಿಗರು ಕಾತರದಿಂದ ಕಾಯುತ್ತಿದ್ದಾರೆ. 


ಬೇಳೂರು ಗೋಪಾಲಕೃಷ್ಣ ಅಭಿಮಾನಿಗಳು ದೇವಸ್ಥಾನ ಸೇರಿ ಹಲವು ಕಡೆ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ. ಇಂದು ರಾತ್ರಿ ಒಳಗೆ ಯಾರಿಗೆಲ್ಲ ಮಂತ್ರಿ ಸ್ಥಾನ ಸಿಗುತ್ತದೆ ಎಂಬುದರ ಬಗ್ಗೆ  ಅಧಿಕೃತ ಘೋಷಣೆ ಬರುವ ಸಾಧ್ಯತೆ ಇದ್ದು ಬೇಲೂರು ಗೋಪಾಲಕೃಷ್ಣ ಅಭಿಮಾನಿಗಳು  ಕಾತರದಿಂದ ಕಾಯುತ್ತಿದ್ದಾರೆ..









Previous Post Next Post