ಶಿವಮೊಗ್ಗ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ, ಸ್ಥಳಕ್ಕೆ ಶ್ವಾನದಳ ದೌಡು
ಶಿವಮೊಗ್ಗ: ನಗರದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಈ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿರುವ ಹಿನ್ನೆಲೆ, ನ್ಯಾಯಾಲಯದ ಆವರಣದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಶಿವಮೊಗ್ಗ ನ್ಯಾಯಾಲಯದ ಸಂಕೀರ್ಣದಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಬಂದ ಹಿನ್ನಲೆ ತಕ್ಷಣ ಎಚ್ಚೆತ್ತುಕೊಂಡ ಪೊಲೀಸ್ ಇಲಾಖೆ, ಶ್ವಾನದಳ ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ನ್ಯಾಯಾಲಯದ ಆವರಣ, ವಿವಿಧ ಕೊಠಡಿಗಳು ಹಾಗೂ ಕಾರಿಡಾರ್‌ಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಕೋರ್ಟ್ ಸುತ್ತ ಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಐದು ಮಿನಿ ಸಿಲಿಂಡರ್ ಹಾಗೂ ಕಬ್ಬಿಣ ಸಿಡಿಸುವುದಾಗಿ ಬೆದರಿಕೆ ಹಾಕಲಾಗಿದ್ದು ತಡರಾತ್ರಿ ಒಂದುವರೆಗೆ ಮುಖ್ಯನ್ಯಾಧಿಶರಿಗೆ ಮೇಲ್ ಮಾಡಿ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಇಂದು ಮಧ್ಯಾಹ್ನ ಎರಡುವರೆಗೆ ಸ್ಟೋಟ ಮಾಡುವುದಾಗಿ ಬೆದರಿಕೆ ಹಾಕಲಾಗಿದ್ದು ನ್ಯಾಯಾಲಯದ ಆವರಣಕ್ಕೆ ಬರುವ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರ ವಾಹನಗಳನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ..
Tags:
ಶಿವಮೊಗ್ಗ ಸುದ್ದಿ