ತೀರ್ಥಹಳ್ಳಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಯುವಕನ ಬಂಧನ Crime

ತೀರ್ಥಹಳ್ಳಿಯಲ್ಲಿ ಗಾಂಜಾ ಸೇವಿಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಯುವಕನ ಬಂಧನ

ತೀರ್ಥಹಳ್ಳಿ: ಪಟ್ಟಣದ ಮೀನು ಮಾರ್ಕೆಟ್ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ, ವೈದ್ಯಕೀಯ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ
ಪ್ರಕರಣ ದಾಖಲಿಸಲಾಗಿದೆ.

ಜೂ.2ರಂದು ಮಧ್ಯಾಹ್ನ ವಿಶೇಷ ಗಸ್ತು ಕರ್ತವ್ಯದಲ್ಲಿದ್ದ ತೀರ್ಥಹಳ್ಳಿ ಪೊಲೀಸರು, ಮೀನು ಮಾರ್ಕೆಟ್ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಜೋರಾಗಿ ಕೂಗಾಡುತ್ತಾ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿರುವುದನ್ನು ಗಮನಿಸಿದರು. ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡ ಕೂಡಲೇ ಆತ ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಆತನನ್ನು ಬೆನ್ನಟ್ಟಿ ಹಿಡಿದು ವಿಚಾರಣೆ ನಡೆಸಿದರು.

ಮೇಲಿನ ಕುರುವಳ್ಳಿಯ ನಿವಾಸಿಯಾಗಿರುವ 21 ವರ್ಷದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೇ ತಡಬಡಾಯಿಸಿದ್ದಾನೆ.ಆತನ ವರ್ತನೆಯಲ್ಲಿ ನಶೆಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು.ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. 

ವೈದ್ಯಕೀಯ ವರದಿ ಆಧರಿಸಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಾನೂನು ಕ್ರಮ ಕೈಗೊಂಡಿದ್ದಾರೆ.





Previous Post Next Post